• Slide
  Slide
  Slide
  previous arrow
  next arrow
 • ಬಸ್ ಟೆಂಪೋ ನಡುವೆ ಅಪಘಾತ; 20ಕ್ಕೂ ಹೆಚ್ಚು ಮಂದಿಗೆ ಗಾಯ

  300x250 AD

  ಭಟ್ಕಳ:ತಾಲೂಕಿನ ತೆರ್ನಮಕ್ಕಿ ಚರ್ಚ್ ಸಮೀಪ ಕೆ.ಎಸ್.ಆರ್.ಟಿ.ಸಿ ವೋಲ್ವೋ ಬಸ್ ಹಾಗೂ ಮಹೀಂದ್ರಾ ಪಾಸೆಂಜರ್ ಟೆಂಪೋ ನಡುವೆ ಅಪಘಾತ ಸಂಭವಿಸಿ 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ನಡೆದಿದೆ.

  ಕಾರವಾರದಿಂದ ಮಂಗಳೂರು ಕಡೆಗೆ ಹೊರಟಿದ್ದ ಐರಾವತ ಬಸ್, ಹೊನ್ನಾವರದಿಂದ ಭಟ್ಕಳ ಕಡೆಗೆ ಹೊರಟಿದ್ದ ಟೆಂಪೋಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ. ಬಸ್‌ನ ಮುಂಬದಿ ಸೀಟ್‌ನಲ್ಲಿ ಕುಳಿತ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಭಟ್ಕಳದ ಸರ್ಕಾರಿ ಆಸ್ಪತ್ರೆಗೆ ಗಾಯಾಳುಗಳನ್ನು ದಾಖಲು ಮಾಡಲಾಗಿದೆ. ಸ್ಥಳಕ್ಕೆ ಮುರುಡೇಶ್ವರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

  ಅಪಘಾತದ ವಿಷಯ ತಿಳಿದು ಭಟ್ಕಳ ಸಹಾಯಕ ಆಯುಕ್ತೆ ಮಮತಾ ದೇವಿ ಜಿ.ಎಸ್ ಭಟ್ಕಳ ಸರ್ಕಾರಿ ಆಸ್ಪತ್ರೆಗೆ ಬಂದು ಗಾಯಾಳುಗಳ ಯೋಗಕ್ಷೇಮ ವಿಚಾರಿಸಿದ್ದಾರೆ. ಇನ್ನು ಭಟ್ಕಳ ಸರ್ಕಾರಿ ಆಸ್ಪತ್ರೆಗೆ ಪಶ್ಚಿಮ ಘಟ್ಟಗಳ ಸಂರಕ್ಷಣಾ ಕಾರ್ಯಪಡೆಯ ಅಧ್ಯಕ್ಷ ಗೋವಿಂದ ನಾಯ್ಕ ಕೂಡ ಭೇಟಿ ನೀಡಿದ್ದಾರೆ.

  300x250 AD

  ಬಸ್ ನಲ್ಲಿ 50 ಕ್ಕೂ ಹೆಚ್ಚು ಪ್ರಯಾಣಿಕರಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಡಿಕ್ಕಿಯ ರಭಸಕ್ಕೆ ಬಸ್ ಮುಂಭಾಗ ಹಾಗೂ ಟೆಂಪೋ ಹಿಂಭಾಗದಲ್ಲಿ ಭಾರೀ ಹಾನಿಯಾಗಿದೆ.

  Share This
  300x250 AD
  300x250 AD
  300x250 AD
  Leaderboard Ad
  Back to top