Slide
Slide
Slide
previous arrow
next arrow

ದಸರಾ ಕಾವ್ಯೋತ್ಸವ ಹಾಗೂ ಬಹುಮಾನ ವಿತರಣಾ ಕಾರ್ಯಕ್ರಮ

300x250 AD

ಭಟ್ಕಳ: ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಮಠದ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ದಸರಾ ಕಾವ್ಯೋತ್ಸವ ಹಾಗೂ ಬಹುಮಾನ ವಿತರಣಾ ಕಾರ್ಯಕ್ರಮವು ನಡೆಯಿತು. ಕಾರ್ಯಕ್ರಮವನ್ನು ಜ್ಞಾನೇಶ್ವರಿ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ಆರ್. ನರಸಿಂಹ ಮೂರ್ತಿಯವರು ಉದ್ಘಾಟಿಸಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಾಹಿತಿಗಳಾದ ನಾರಾಯಣ ಯಾಜಿಯವರು ವಹಿಸಿದ್ದು, ಬಹುಮಾನ ವಿತರಕರಾಗಿ ನಿವೃತ್ತ ಶಿಕ್ಷಕರು, ಶಿಕ್ಷಕ ಸಂಘದ ಮಾಜಿ ಅಧ್ಯಕ್ಷ ಶಂಕರ ನಾಯ್ಕ ಆಗಮಿಸಿದ್ದರು.

ಕವಿಗೋಷ್ಠಿಯಲ್ಲಿ ಹಲವಾರು ಯುವ, ಹಿರಿಯ ಕವಿಗಳು ಭಾಗವಹಿಸಿ ಕಾರ್ಯಕ್ರಮದ ಯಶಸ್ಸಿಗೆ ಕಾರಣರಾದರು. ಕಾರ್ಯಕ್ರಮದಲ್ಲಿ ನಿವೃತ್ತ ಶಿಕ್ಷಕ ಶಂಕರ ನಾಯ್ಕರನ್ನು ಸಾಹಿತ್ಯ ಪರಿಷತ್ ವತಿಯಿಂದ ಸನ್ಮಾನಿಸಲಾಯಿತು. ಕಸಾಪ ಭಟ್ಕಳ ತಾಲೂಕು ಘಟಕದ ಅಧ್ಯಕ್ಷರು, ಸರ್ವ ಸದಸ್ಯರು ಆದ ಗಂಗಾಧರ್ ನಾಯ್ಕ್ ಸನ್ಮಾನ ಸ್ವೀಕರಿಸಿ ಮಾತನಾಡಿ ಮಠದ ಸಿದ್ಧಿವಿನಾಯಕ ದೇವಸ್ಥಾನದ ಆಡಳಿತ ಮಂಡಳಿಗೆ ಹೃದಯ ತುಂಬಿ ನಮನಗಳನ್ನು ಸಲ್ಲಿಸಿ, ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದ ಸರ್ವರಿಗೂ ವಂದನೆಗಳನ್ನು ಅರ್ಪಿಸಿದರು.

300x250 AD
Share This
300x250 AD
300x250 AD
300x250 AD
Back to top