Slide
Slide
Slide
previous arrow
next arrow

ಬನವಾಸಿ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಗಾಂಧೀಜಿ,ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮದಿನಾಚರಣೆ

300x250 AD

ಸಿರಸಿ; ಬನವಾಸಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಎಫ್.ನಾಯ್ಕ ಅಧ್ಯಕ್ಷತೆಯಲ್ಲಿ ಅ.2 ರವಿವಾರ ಬೆಳಿಗ್ಗೆ 9.30ಕ್ಕೆ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 153 ನೇ ಜನ್ಮದಿನಾಚರಣೆ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿಯವರ 118 ನೇ ಜನ್ಮದಿನಾಚರಣೆಯನ್ನು ಬನವಾಸಿ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಆಚರಣೆ ಮಾಡಲಾಯಿತು ಈ ಸಂದರ್ಭದಲ್ಲಿ ಕಚೇರಿಯ ಮುಂಭಾಗದಲ್ಲಿ ಸ್ವಚ್ಛತೆಯನ್ನು ಮಾಡಲಾಯಿತು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ಬಸವರಾಜ ದೊಡ್ಮನಿ, ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀಮತಿ ಶ್ರೀಲತಾ ಶಿವಾಜಿ ಕಾಳೇರಮನಿ, ಯುವ ಕಾಂಗ್ರೆಸ್ ಅಧ್ಯಕ್ಷ ಆಶೀಫ ಚೌದರಿ,ಗುಡ್ನಾಪುರ ಘಟಕಾಧ್ಯಕ್ಷ ಪುಟ್ಟಪ್ಪ ಮಧುರವಳ್ಳಿ, ಪಕ್ಷದ ಮುಖಂಡರುಗಳಾದ ಆನಂದ್ ಮಧುರವಳ್ಳಿ ಬಸವರಾಜ ಮಧುರವಳ್ಳಿ, ಮುದ್ದಪ್ಪ ಬನವಾಸಿ, ಯುತ್ ಸಾಮಾಜಿಕ ಜಾಲ ತಾಣಗಳ ಅಧ್ಯಕ್ಷ ಗಣಪತಿ ಭಾಶಿ, ಅರುಣ್ ಅಜ್ಜರಣಿ,ಬಿ.ಶಿವಾಜಿ ಬನವಾಸಿ , ಮುಂತಾದವರು ಉಪಸ್ಥಿತರಿದ್ದರು.

300x250 AD
Share This
300x250 AD
300x250 AD
300x250 AD
Back to top