ಸಿದ್ದಾಪುರ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ( ರಿ ) ಸಿದ್ದಾಪುರ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಧರ್ಮಸ್ಥಳ, ಅಖಿಲ ಕರ್ನಾಟಕ ಜಿಲ್ಲಾ ಜನಜಾಗೃತಿ ವೇದಿಕೆ ಶಿರಸಿ ಇವರ ಸಹಯೋಗದೊಂದಿಗೆ ಪರಮ ಪೂಜ್ಯ ಡಾ. ಡಿ,ವೀರೇಂದ್ರ ಹೆಗ್ಗಡೆಯವರು ಹಾಗೂ ಮಾತ್ರ ಶ್ರೀ ಡಾ. ಹೇಮಾವತಿ. ವಿ. ಹೆಗ್ಗಡೆಯವರ ಮಾರ್ಗದರ್ಶನದೊಂದಿಗೆ ಗಾಂಧಿ ಜಯಂತಿ ಸಂಭ್ರಮಾಚರಣೆಯ ಪ್ರಯುಕ್ತ ಪಟ್ಟಣದ ಧನ್ವಂತರಿ ಆಯುರ್ವೇದಿಕ ಮೆಡಿಕಲ್ ಕಾಲೇಜಿನ ಸಭಾಂಗಣದಲ್ಲಿ ದುಶ್ಚಟ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಜನಜಾಗೃತಿ ಜಾಥಾ ಮತ್ತು ನವಜೀವನ ಸದಸ್ಯರ ಅಭಿನಂದನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮವನ್ನು ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ವಿ. ರಾವ್ ಉದ್ಘಾಟಿಸಿ, ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ನಡೆಸುವ ಮದ್ಯವರ್ಜನ ಶಿಬಿರದ ಮೂಲಕ ಪಾನ ಮುಕ್ತರಾಗಿ ನವಜೀವನ ಸದಸ್ಯರಾಗಿ ಉತ್ತಮ ಬಾಳ್ವೆ ನಡೆಸುತ್ತಿರುವ ತಮ್ಮೆಲ್ಲರಿಗೂ ಅಭಿನಂದನೆಗಳು ಎಂದು ಶುಭ ಹಾರೈಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷ ಸುಭಾಸ್ ನಾಯ್ಕ್ ವಹಿಸಿದ್ದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಬಾಬು ನಾಯ್ಕ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ನವಜೀವನ ಸದಸ್ಯರಿಗೆ ಧನ್ವಂತರಿ ಆಯುರ್ವೇದ ಮಹಾವಿದ್ಯಾಲಯ ಸಿದ್ದಾಪುರದ ಪ್ರಾಚಾರ್ಯೆ ಶ್ರೀಮತಿ ಡಾ. ರೂಪ ಭಟ್ ಮತ್ತು ಪ್ರೊಫೆಸರ್ ರಾಮು ಕಿಣಿ ಉಪನ್ಯಾಸ ನೀಡಿದರು.
ಕಾರ್ಯಕ್ರಮದಲ್ಲಿ ಜನಜಾಗೃತಿ ವೇದಿಕೆ ಸದಸ್ಯ ರಮೇಶ್ ಹಾರ್ಸಿಮನೆ, ಉಪೇಂದ್ರ ಪೈ, ಪಿ.ಎಸ್.ಐ. ಎಮ್. ಜಿ. ಕಂಬಾರ, ತಾಲೂಕಿನ ಎಲ್ಲಾ ಮೇಲ್ವಿಚಾರಕ ಶ್ರೇಣಿಯ ಸಿಬ್ಬಂದಿಗಳು, ತಾಲೂಕಿನ ಎಲ್ಲಾ ಸೇವಾಪ್ರತಿನಿಧಿಗಳು,ತಾಲೂಕಿನ ಎಲ್ಲಾ ಶೌರ್ಯ ತಂಡದ ಸದಸ್ಯರು, ನವಜೀವನ ಸಮಿತಿ ಸದಸ್ಯರು, ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಅಧ್ಯಕ್ಷರು/ ಪದಾಧಿಕಾರಿಗಳು, ಸಂಘದ ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ತಾಲೂಕು ಯೋಜನಾಧಿಕಾರಿ ಪ್ರಭಾಕರ ನಾಯ್ಕ ಸ್ವಾಗತಿಸಿದರು, ಕೃಷಿ ಮೇಲ್ವಿಚಾರಕ ಮಹಾದೇವ. ಬಿ. ಕಾರ್ಯಕ್ರಮವನ್ನು ನಿರೂಪಿಸಿದರು. ಜ್ಞಾನವಿಕಾಸ ಸಮನ್ವಯಾಧಿಕಾರಿ ಶ್ರೀಮತಿ ಪ್ರಭಾವತಿ ವಂದಿಸಿದರು.