
ಕುಮಟಾ: ಪಟ್ಟಣದ ತಾಲೂಕಾ ಪಂಚಾಯತ ಸಭಾಭವನದಲ್ಲಿ ತಾ.ಪಂ ಆಡಳಿತಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಆ. 6 ರಂದು ಮಧ್ಯಾಹ್ನ 11 ಗಂಟೆಗೆ ಮಾಸಿಕ ಕೆಡಿಪಿ ಸಭೆ ನಡೆಯಲಿದೆ.
ಅಂದು ನಡೆಯುವ ಮಾಸಿಕ ಕೆಡಿಪಿ ಸಭೆಗೆ ತಾ.ಪಂ ಸರ್ವ ಸದಸ್ಯರು ಹಾಗೂ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಹಾಜರಿದ್ದು, ತಮ್ಮ ತಮ್ಮ ಇಲಾಖೆಯ ಅಡಿಯಲ್ಲಿ ನಡೆದ ಅಭಿವೃದ್ಧಿ ಹಾಗೂ ಪ್ರಗತಿಯಲ್ಲಿರುವ ಕಾಮಗಾರಿಗಳ ಬಗ್ಗೆ ಮಾಹಿತಿ ನೀಡಬೇಕು ಎಂದು ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.