• Slide
    Slide
    Slide
    previous arrow
    next arrow
  • ಕಲ್ಲೂರಿನಲ್ಲಿ ವನ್ಯಜೀವಿ ಸಂರಕ್ಷಣಾ ಸಪ್ತಾಹ

    300x250 AD

    ಸಿದ್ದಾಪುರ: ತಾಲೂಕಿನ ಕಲ್ಲೂರಿನಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಎಸ್‌ಡಿಎಂಸಿ ಹಾಗೂ ಅರಣ್ಯ ಇಲಾಖೆ ಸಂಯುಕ್ತ ಆಶ್ರಯದಲ್ಲಿ 2022-23ನೇ ಸಾಲಿನ ವನ್ಯಜೀವಿ ಸಂರಕ್ಷಣಾ ಸಪ್ತಾಹವನ್ನು ಆಚರಿಸಲಾಯಿತು.
    ಕಾರ್ಯಕ್ರಮವನ್ನು ಶಾಲೆಯ ಪುಟಾಣಿ ಮಕ್ಕಳು ಉದ್ಘಾಟಿಸಿದ್ದು ವಿಶೇಷವಾಗಿತ್ತು. ಅರಣ್ಯ ಇಲಾಖೆಯ ಸಿಬ್ಬಂದಿ ಅಮರ್ ಅವರು ವನ್ಯಜೀವಿಗಳ ಸಂರಕ್ಷಣೆ ಮತ್ತು ಪರಿಸರದ ಸಮತೋಲನದ ಬಗ್ಗೆ ಮಾತನಾಡಿದರು. ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಚಿತ್ರಕಲೆ ಮತ್ತು ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನವನ್ನು ನೀಡಲಾಯಿತು. ವೇದಿಕೆಯಲ್ಲಿ ಎಸ್.ಡಿ.ಎಂ.ಸಿ ಪದಾಧಿಕಾರಿಗಳು, ಗ್ರಾಮಸ್ಥರು, ಶಿಕ್ಷಕರು ಉಪಸ್ಥಿತರಿದ್ದರು. ಶಾಲಾ ಮುಖ್ಯ ಶಿಕ್ಷಕ ಶ್ರೀಕಾಂತ ನಾಯ್ಕ ಸ್ವಾಗತಿಸಿದರು. ಕವನ ಸಂಗಡಿಗರು ಪ್ರಾರ್ಥಿಸಿದರು.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top