• Slide
  Slide
  Slide
  previous arrow
  next arrow
 • ಹೆಬ್ಬಾರ್ ಗೆ ಖಾತ್ರಿಯಾಯ್ತು ಸಚಿವ ಸ್ಥಾನ ! ಇಂದೇ ಪ್ರಮಾಣ ವಚನ

  300x250 AD

  ಯಲ್ಲಾಪುರ: ಮುಖ್ಯಮಂತ್ರಿಗ ಬಸವರಾಜ ಬೊಮ್ಮಾಯಿ ಅವರು ಬುಧವಾರ ಮುಂಜಾನೆ ದೂರವಾಣಿ ಮೂಲಕವಾಗಿ ಕರೆ ಮಾಡಿ, ಅವರ ನೇತೃತ್ವದ ಸಚಿವ ಸಂಪುಟದಲ್ಲಿ ಸಚಿವನಾಗಿ ಪ್ರಮಾಣ ವಚನ ಸ್ವೀಕರಿಸುವುದಕ್ಕೆ ಆಹ್ವಾನಿಸಿರುವುದನ್ನು ನಿಮ್ಮ ಮುಂದೆ ಹಂಚಿಕೊಳ್ಳುವುದಕ್ಕೆ ಅತ್ಯಂತ ಸಂತಸವಾಗುತ್ತಿದೆ ಎಂದು ಶಾಸಕ ಶಿವರಾಮ್ ಹೆಬ್ಬಾರ್ ಹೇಳಿದ್ದಾರೆ.

  ಈ ಕುರಿತು ಪ್ರಕಟಣೆ ನೀಡಿರುವ ಅವರು, ಕಳೆದ 1 ವರ್ಷ 5 ತಿಂಗಳ ಕಾಲ ರಾಜ್ಯದ ಕಾರ್ಮಿಕ ಖಾತೆ ಸಚಿವನಾಗಿ ಪಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೊಟ್ಟ ಜವಾಬ್ದಾರಿಯನ್ನು ಶ್ರದ್ಧೆಯಿಂದ ನಿರ್ವಹಿಸಿ, ರಾಜ್ಯಾದ್ಯಂತ ಪ್ರವಾಸ ಮಾಡಿ ಶ್ರಮಿಕ ವರ್ಗಗಳ ಆರ್ಥಿಕ ಹಾಗೂ ಸಾಮಾಜಿಕ ಭದ್ರತೆಗಾಗಿ ಹಲವಾರು ಮಹತ್ವದ ಯೋಜನೆಗಳನ್ನು ಜಾರಿಗೆ ತರಲಾಗಿದೆ, ನನಗೆ ನೀಡಿದ ಜವಾಬ್ದಾರಿಯನ್ನು ಅತ್ಯಂತ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿದ್ದೆನೆ ಮುಂದೆಯೂ ಸಹ ಕ್ಷೇತ್ರದ, ರಾಜ್ಯದ ಜನತೆಗೆ ಯಾವುದೇ ಚ್ಯುತಿ ಬರದಂತೆ ಕಾರ್ಯನಿರ್ವಹಿಸುತ್ತೆನೆ.

  300x250 AD

  ನನಗೆ ಮತ್ತೊಮ್ಮೆ ಸಚಿವ ಸ್ಥಾನ ಲಭಿಸಲು ಮೂಲ ಕಾರಣಿಕರರ್ತರಾದ ಯಲ್ಲಾಪುರ-ಮುಂಡಗೋಡ-ಬನವಾಸಿ ವಿಧಾನಸಭಾ  ಕ್ಷೇತ್ರದ ಮಹಾ ಜನತೆಗೆ, ನನ್ನ ಮೇಲೆ ನಂಬಿಕೆ ಇಟ್ಟು ಮತ್ತೊಮ್ಮೆ ರಾಜ್ಯ ಜನತೆಯ ಸೇವೆ ಮಾಡುವುದಕ್ಕೆ ಅವಕಾಶ ಕಲ್ಪಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ರಾಜ್ಯ, ಮತ್ತು ಕೇಂದ್ರದ ಎಲ್ಲಾ ನಾಯಕರಿಗೂ ನಮ್ಮ ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ ಎಂದು ಅವರು ತಿಳಿಸಿದ್ದಾರೆ.

  Share This
  300x250 AD
  300x250 AD
  300x250 AD
  Leaderboard Ad
  Back to top