ಯಲ್ಲಾಪುರ; ಪಟ್ಟಣದ ಶಕ್ತಿ ಗಣಪತಿ ದೇವಸ್ಥಾನಕ್ಕೆ ಕಳ್ಳರು ನುಗ್ಗಿ ಕಾಣಿಕೆ ಡಬ್ಬಿ ಕಳವು ಮಾಡಿದ್ದಾರೆ. ದೇವಸ್ಥಾನದ ಬೀಗ ಮುರಿದು ಒಳನುಗ್ಗಿದ ಕಳ್ಳರು ಕಾಣಿಕೆ ಡಬ್ಬಿಯನ್ನು ಹೊತ್ತೊಯ್ದಿದ್ದಾರೆ. ಕಾಣಿಕೆ ಡಬ್ಬಿಯಲ್ಲಿ ಸುಮಾರು 7000 ರೂ ಹಣ ಇತ್ತು ಎನ್ನಲಾಗಿದೆ. 10000 ರೂ ಮೌಲ್ಯದ ಕಾಣಿಕೆ ಡಬ್ಬಿ ಸೇರಿ ಒಟ್ಟು 17000 ರೂ ಮೌಲ್ಯದ ಸ್ವತ್ತನ್ನು ಕಳವು ಮಾಡಿದ್ದಾರೆ. ಈ ಕುರಿತು ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಕ್ತಿ ಗಣಪತಿ ದೇವಸ್ಥಾನದಲ್ಲಿ ಕಳ್ಳತನ; ಪ್ರಕರಣ ದಾಖಲು
