• Slide
    Slide
    Slide
    previous arrow
    next arrow
  • ಎಎಪಿ ಸಚಿವರ ಹಿಂದೂ ವಿರೋಧಿ ಹೇಳಿಕೆಗೆ ವ್ಯಾಪಕ ಟೀಕೆ

    300x250 AD

    ನವದೆಹಲಿ: ಆಮ್ ಆದ್ಮಿ ಪಕ್ಷದ ಸಚಿವ ರಾಜೇಂದ್ರ ಪಾಲ್ ಗೌತಮ್ ಅವರು ಹಿಂದೂ ವಿರೋಧಿ ಹೇಳಿಕೆ ನೀಡಿ ವ್ಯಾಪಕ ಟೀಕೆಗೆ ಗುರಿಯಾಗಿದ್ದಾರೆ. 10,000 ಮಂದಿ ಬೌದ್ಧ ಧರ್ಮಕ್ಕೆ ಮತಾಂತರಗೊಳ್ಳುವ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಅವರು ಇನ್ನು ಮುಂದೆ ಹಿಂದೂ ದೇವರನ್ನು ಪೂಜಿಸುವುದಿಲ್ಲ ಎಂದಿದ್ದಾರೆ.

    ಈ ವಿಷಯಕ್ಕೆ ಸಂಬಂಧಿಸಿದಂತೆ ಬಿಜೆಪಿ ಎಎಪಿ ಪಕ್ಷದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಹಿಂದೂ ದೇವರುಗಳನ್ನು ಅವಮಾನಿಸಿದ ಆರೋಪದ ಮೇಲೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಸಚಿವ ರಾಜೇಂದ್ರ ಪಾಲ್ ಗೌತಮ್ ಅವರನ್ನು ವಜಾಗೊಳಿಸಬೇಕೆಂದು ಒತ್ತಾಯಿಸಿದೆ.

    ಆಮ್ ಆದ್ಮಿ ಪಕ್ಷದ (ಎಎಪಿ) ಸಚಿವ ರಾಜೇಂದ್ರ ಪಾಲ್ ಗೌತಮ್ ಅವರು ಇತ್ತೀಚೆಗೆ ನಡೆದ ಸಾಮೂಹಿಕ ಮತಾಂತರ ಕೂಟದಲ್ಲಿ ಭಾಗವಹಿಸಿ, ಹಿಂದೂ ದೇವರು ಮತ್ತು ದೇವತೆಗಳನ್ನು ಪೂಜಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದು, ಈ ಮೂಲಕ ಹಿಂದೂಗಳನ್ನು ಅವಮಾನಿಸಿದ್ದಾರೆ ಎಂದು ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.

    ಅಕ್ಟೋಬರ್ 5 ರಂದು ಬೌದ್ಧ ಧರ್ಮಕ್ಕೆ ಮತಾಂತರಗೊಳ್ಳುವ ದೀಕ್ಷೆಯಲ್ಲಿ ಪಾಲ್ಗೊಳ್ಳಲು ರಾಷ್ಟ್ರ ರಾಜಧಾನಿಯ ಅಂಬೇಡ್ಕರ್ ಭವನದಲ್ಲಿ  10,000 ಕ್ಕೂ ಹೆಚ್ಚು ಜನರು ಜಮಾಯಿಸಿದ್ದರು. ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಸಚಿವರು ನೀಡಿದ ಹೇಳಿಕೆ ಈಗ ವೈರಲ್‌ ಆಗಿದೆ. ದೆಹಲಿ ಬಿಜೆಪಿ ನಾಯಕರು ಸಾಮಾಜಿಕ ಮಾಧ್ಯಮದಲ್ಲಿ ವಿವಾದಾತ್ಮಕ ಘಟನೆಯ ವೀಡಿಯೊಗಳನ್ನು ಹಂಚಿಕೊಂಡಿದ್ದಾರೆ.

    300x250 AD

    ಕೇಜ್ರಿವಾಲ್ ಸರ್ಕಾರದ ಸಮಾಜ ಕಲ್ಯಾಣ ಸಚಿವ ಗೌತಮ್ ಅವರು ದಸರಾದಂದು ಕರೋಲ್ ಬಾಗ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಾವಿರಾರು ಜನರ ಸಮ್ಮುಖದಲ್ಲಿ ಹಿಂದೂ ದೇವತೆಗಳಿಗೆ ಅಗೌರವ ತೋರಿಸಿದ್ದಾರೆ ಎಂದು ದೆಹಲಿ ಬಿಜೆಪಿ ಅಧ್ಯಕ್ಷ ಆದೇಶ್ ಗುಪ್ತಾ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದ್ದಾರೆ.ಎಎಪಿ ಪಕ್ಷದ ನಿಜವಾದ ಹಿಂದೂ ವಿರೋಧಿ ಮುಖ ಬಯಲಾಗಿದೆ ಎಂದಿದ್ದಾರೆ.

    ಕೃಪೆ; http://news13.in

    Share This
    300x250 AD
    300x250 AD
    300x250 AD
    Leaderboard Ad
    Back to top