ಸಿದ್ಧಾಪುರ: ಸುಪ್ರೀಂ ಕೋರ್ಟನಲ್ಲಿ ತಿರಸ್ಕಾರವಾಗಿರುವ ಅರಣ್ಯವಾಸಿಗಳನ್ನ ಒಕ್ಕಲೆಬ್ಬಿಸಬೇಕೆಂಬ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಹಿನ್ನೆಲೆಯಲ್ಲಿ ಹಾಗೂ ಅಸಮರ್ಪಕ ಜಿಪಿಎಸ್ ಕಾರ್ಯದ ಕುರಿತು ಸಿದ್ಧಾಪುರ ತಾಲೂಕಿನ, ಬಾಲಭವನ, ಲಾಯನ್ಸ ಕ್ಲಬ್ ಆವರಣದಲ್ಲಿ ಅ.12 ಮುಂಜಾನೆ 10 ಗಂಟೆಗೆ ಸಿದ್ಧಾಪುರ ತಾಲೂಕ ವ್ಯಾಪ್ತಿಯ ಅರಣ್ಯ ಅತಿಕ್ರಮಣದಾರರ ಸಭೆಯನ್ನು ಕರೆಯಲಾಗಿದೆ ಎಂದು ಜಿಲ್ಲಾ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪರಿಸರವಾದಿಗಳು ಅರಣ್ಯ ಹಕ್ಕು ಕಾಯಿದೆ ಅಡಿಯಲ್ಲಿ ತಿರಸ್ಕಾರವಾಗಿರುವ ಅರಣ್ಯವಾಸಿಗಳನ್ನ ಒಕ್ಕಲೆಬ್ಬಿಸಬೇಕೆಂದು ಸುಪ್ರೀಂ ಕೋರ್ಟನಲ್ಲಿ ದಾಖಲಿಸಿದ ಸಾರ್ವಜನಿಕ ಹಿತಾಸಕ್ತಿಯ ಅರ್ಜಿ ಅಂತಿಮ ವಿಚಾರಣೆ ಜರುಗುತ್ತಿರುವ ಮಾಹಿತಿ, ಅರಣ್ಯವಾಸಿಗಳ ಅರ್ಜಿಯನ್ನ ಕಾನೂನಿಗೆ ವ್ಯತಿರಿಕ್ತವಾಗಿ ವಿಳೆಮಾಡುತ್ತಿರುವ, ಅರಣ್ಯವಾಸಿಗಳ ಪರವಾಗಿ ಸುಪ್ರೀಂ ಕೋರ್ಟನಲ್ಲಿ ತಿದ್ದುಪಡಿ ಪ್ರಮಾಣ ಪತ್ರ ಸಲ್ಲಿಸಲು ವಿಧಾನ ಸಭೆಯಲ್ಲಿ ತೀರ್ಮಾನಿಸಲು ಸರಕಾರಕ್ಕೆ ಅಗ್ರಹಿಸಲಾದ ಹಾಗೂ ಅರಣ್ಯ ಸಿಬ್ಬಂದಿಗಳ ದೌರ್ಜನ್ಯ ಕುರಿತು ಸಭೆಯಲ್ಲಿ ಚರ್ಚಿಸಲಾಗುವುದೆಂದು ಅವರು ತಿಳಿಸಿದ್ದಾರೆ.
ಆಸಕ್ತ ಅರಣ್ಯ ಅತಿಕ್ರಮಣದಾರರು ಸದ್ರಿ ಕಾರ್ಯಕ್ರಮಕ್ಕೆ ಆಗಮಿಸಲು ಜಿಲ್ಲಾಧ್ಯಕ್ಷ ರವೀಂದ್ರ ನಾಯ್ಕ ತಿಳಿಸಿದ್ದಾರೆ.