ಕಾರವಾರ: ಭಾರತ ಸರ್ಕಾರದ ಯೋಜನೆಯಾದ ರಾಷ್ಟ್ರೀಯ ವಿದ್ಯಾರ್ಥಿವೇತನ ಪೋರ್ಟಲ್ನ ಅಡಿಯಲ್ಲಿ 2022-23ನೇ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಸರಕಾರಿ, ಅನುದಾನಿತ, ಅನುದಾನ ರಹಿತ ಮತ್ತು ಖಾಸಗಿ ಶಾಲೆಗಳಲ್ಲಿ ಕಲಿಯುತ್ತಿರುವ ಮತೀಯ ಅಲ್ಪಸಂಖ್ಯಾತರ ಸಮುದಾಯದ (ಮುಸ್ಲಿಂ ಕ್ರಿಶ್ಚಿಯನ್, ಜೈನ್, ಬೌದ್ಧ, ಪಾರ್ಸಿ, ಸಿಖ್), ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ (1ರಿಂದ 10ನೇ ತರಗತಿ) ವಿದ್ಯಾರ್ಥಿವೇತನಕ್ಕೆ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಿ ಸೆ.30 ಕೊನೆ ದಿನಾಂಕವಾಗಿ ನಿಗದಿಪಡಿಸಲಾಗಿತ್ತು. ಈಗ ಆ ಅವಧಿಯನ್ನು ವಿಸ್ತರಿಸಿ ಅ.15ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ.
ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು https://scholarships.gov.in/ ಹಾಗೂ ಇಲಾಖೆಯ ವೆಬ್ಸೈಟ್ https://dom.karnataka.gov.in/ಇಲಾಖೆಯ ಟ್ವಿಟರ್ ಐಡಿ: http://@WelfareUttara ಹೆಚ್ಚಿನ ಮಾಹಿತಿಗಾಗಿ ತಾಲೂಕಿನ ಅಲ್ಪಸಂಖ್ಯಾತರ ತಾಲೂಕು ಮಾಹಿತಿ ಕೇಂದ್ರ, ಇಲ್ಲವೇ ಜಿಲ್ಲಾ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ದೂರವಾಣಿ ಸಂಖ್ಯೆ 08382220336 / 8277799990 ಇಲ್ಲಿಗೆ ಸಂಪರ್ಕಿಸುವAತೆ ಜಿಲ್ಲಾ ಅಧಿಕಾರಿ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಸಿದ್ದಾರೆ.