
ಬೆಂಗಳೂರು: ರಾಜ್ಯದ ಪದವಿ ಕಾಲೇಜುಗಳಲ್ಲಿ ಪ್ರವೇಶ ಪ್ರಕ್ರಿಯೆಯನ್ನು ಮುಂದಿನ ಆದೇಶದವರೆಗೆ ಮುಂದೂಡುವಂತೆ ಕಾಲೇಜು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
ಈ ಹಿಂದೆ ಆಗಸ್ಟ್ 4 ರಿಂದ ಪದವಿ ತರಗತಿಗಳ ಪ್ರವೇಶಾತಿ ಪ್ರಾರಂಭಿಸುವಂತೆ ರಾಜ್ಯದ ಎಲ್ಲಾ ಸರ್ಕಾರಿ , ಅನುದಾನಿತ ಹಾಗೂ ಖಾಸಗಿ ಕಾಲೇಜುಗಳಿಗೆ ಅದೇಶ ನೀಡಲಾಗಿತ್ತು.
ಆದರೆ ಈಗ ಇಲಾಖೆ ಮತ್ತೊಂದು ಸುತ್ತೋಲೆ ಹೊರಡಿಸಿದ್ದು ಇಲಾಖಾ ವ್ಯಾಪ್ತಿಯ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಮುಂದಿನ ಆದೇಶದ ವರೆಗೆ ಪ್ರವೇಶಾತಿ ಪ್ರಕ್ರಿಯೆಯನ್ನು ನಿಲ್ಲಿಸುವಂತೆ ಆದೇಶ ಮಾಡಿದೆ. ಹಾಗೂ ಮುಂದಿನ ದಿನಾಂಕವನ್ನು ಸದ್ಯದಲ್ಲೇ ತಿಳಿಸಲಾಗುವುದು ಎಂದು ಹೇಳಿದೆ.