ಉತ್ತರ ಪ್ರದೇಶ: ಸಮಾಜವಾದಿ ಪಕ್ಷದ ವರಿಷ್ಠ ಹಾಗೂ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್(82ವರ್ಷ) ಅನಾರೋಗ್ಯ ಸಮಸ್ಯೆಯಿಂದ ಇಂದು ನಿಧನರಾಗಿದ್ದಾರೆ. ಕಳೆದ ವಾರ ಇದ್ದಕ್ಕಿದ್ದಂತೆ ಅವರ ಆರೋಗ್ಯ ಹದಗೆಟ್ಟಿದ್ದರಿಂದ ಹರಿಯಾಣದ ಗುರುಗ್ರಾಮ್‌ನ ಮೇದಾಂತ ಆಸ್ಪತ್ರೆಯಲ್ಲಿ ದಾಖಲಿಸಲಾಗಿದ್ದು, ಅಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ. ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಮುಲಾಯಂ ಸಿಂಗ್ ಯಾದವ್ ಅವರ ನಿಧನವನ್ನು ಟ್ವಿಟ್ ಮೂಲಕ ಘೋಷಿಸಿದ್ದಾರೆ.
ಆಗಸ್ಟ್ 22 ರಿಂದ ಚಿಕಿತ್ಸೆ ಪಡೆಯುತ್ತಿದ್ದ ಅವರು, ಕಳೆದ ವಾರ ಆರೋಗ್ಯ ಇನ್ನಷ್ಟು ಕ್ಷೀಣಿಸಿತ್ತು. ಹಾಗಾಗಿ ಮುಲಾಯಂ ಸಿಂಗ್ ಯಾದವ್ ಅವರನ್ನು ಮೇದಾಂತ ಆಸ್ಪತ್ರೆಯ ಐಸಿಯುಗೆ ಸ್ಥಳಾಂತರಿಸಲಾಯಿತು. ಶುಕ್ರವಾರ ಮುಂಜಾನೆ, ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಯುಪಿ ಮಾಜಿ ಸಿಎಂ ಅವರನ್ನು ಭೇಟಿಯಾಗಿ ಅವರ ಆರೋಗ್ಯ ವಿಚಾರಿಸಿದ್ದರು.
ಕಳೆದ 8 ದಿನಗಳಿಂದ ಮುಲಾಯಂ ಸಿಂಗ್ ಯಾದವ್ ಅವರ ಆರೋಗ್ಯ ಸ್ಥಿತಿಯಲ್ಲಿ ಯಾವುದೇ ಸುಧಾರಣೆಯಾಗಿರಲಿಲ್ಲ. ಮೇದಾಂತ ಆಸ್ಪತ್ರೆ ಗುರುವಾರ ಹೊರಡಿಸಿದ ಬುಲೆಟಿನ್‌ನಲ್ಲಿ, ಮುಲಾಯಂ ಸಿಂಗ್ ಅವರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿತ್ತು. ಇಂದು
ನವೆಂಬರ್ 22, 1939 ರಂದು ಜನಿಸಿದ ಮುಲಾಯಂ ಸಿಂಗ್ ಯಾದವ್ ಅವರು ಉತ್ತರ ಪ್ರದೇಶದ ಪ್ರಮುಖ ನಾಯಕರಲ್ಲಿ ಒಬ್ಬರು, ಅವರು ಮೂರು ಬಾರಿ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದಾರೆ ಮತ್ತು ಕೇಂದ್ರ ಸರ್ಕಾರದಲ್ಲಿ ರಕ್ಷಣಾ ಸಚಿವರಾಗಿಯೂ ಸೇವೆ ಸಲ್ಲಿಸಿದ್ದಾರೆ.