ಯಲ್ಲಾಪುರ: ಪಟ್ಟಣದ ಕಾಳಮ್ಮನಗರ ತಾಲೂಕು ಕ್ರೀಡಾಂಗಣದಲ್ಲಿ ನಡೆದ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಮೈನಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಸಾಧನೆ ಮಾಡಿದ್ದಾರೆ.
ಕೆವಿನ್ ಸಿದ್ದಿ 100 ಮೀ ಓಟ ಹಾಗೂ 200 ಮೀ ಓಟದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಬಾಲಕರು ಹಾಗೂ ಬಾಲಕಿಯರ ವಿಭಾಗದ ಕಬ್ಬಡ್ಡಿಯಲ್ಲಿ ಪ್ರಥಮ ಸ್ಥಾನ ಪಡೆದು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಮುಖ್ಯಾಧ್ಯಾಪಕ ಜಿ.ಕೆ.ದಿಂಡವಾರ್, ಶಿಕ್ಷಕರು, ಎಸ್.ಡಿ.ಎಂ.ಸಿಯವರು, ಗ್ರಾಮ ಪಂಚಾಯಿತಿಯವರು ವಿದ್ಯಾರ್ಥಿಗಳಿಗೆ ಶುಭ ಕೋರಿದ್ದಾರೆ.
ಕ್ರೀಡಾಕೂಟ: ಮೈನಳ್ಳಿ ಶಾಲಾ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ
