• Slide
    Slide
    Slide
    previous arrow
    next arrow
  • ಕೃಷ್ಣ ಸಿದ್ದೇಶ್ವರಗೆ ಬೀಳ್ಕೊಡುಗೆ ಸಮಾರಂಭ

    300x250 AD

    ಶಿರಸಿ: ಶ್ರೀ ಮಾರಿಕಾಂಬಾ ದೇವಸ್ಥಾನದಲ್ಲಿ ಕಳೆದ 18 ವರ್ಷಗಳಿಂದ ಸೇವೆ ಸಲ್ಲಿಸಿದ ಕೃಷ್ಣ ಗಣೇಶ ಸಿದ್ದೇಶ್ವರ ಜು.31 ರಂದು ಸೇವಾ ನಿವೃತ್ತಿ ಹೊಂದಿದರು. ಈ ಸಂದರ್ಭದಲ್ಲಿ ಶ್ರೀ ದೇವಾಲಯದ ಧರ್ಮದರ್ಶಿ ಮಂಡಳಿ ಹಾಗೂ ಎಲ್ಲ ಸಿಬ್ಬಂದಿಗಳು ಬೀಳ್ಕೊಡುಗೆ ಸಮಾರಂಭ ಏರ್ಪಡಿಸಿ, ಶ್ರೀ ದೇವಿಯ ಅನುಗ್ರಹಯುಕ್ತ ಪ್ರಸಾದ, ನೆನಪಿನ ಕಾಣಿಕೆ ನೀಡಿ ಗೌರವಿಸಿದರು.


    ಧರ್ಮದರ್ಶಿ ಮಂಡಳಿಯ ಸದಸ್ಯರು ಹಾಗೂ ಸಿಬ್ಬಂದಿಗಳು ಅವರ ಸೇವಾ ಅವಧಿಯಲ್ಲಿ ಅವರು ಸಲ್ಲಿಸಿದ ಸೇವೆಯ ಕುರಿತು ಮೆಚ್ಚುಗೆ ವ್ಯಕ್ತ ಪಡಿಸಿ ಅವರ ನಿವೃತ್ತ ಜೀವನಕ್ಕೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಕೃಷ್ಣ ಸಿದ್ದೇಶ್ವರ ಅವರು ತಮ್ಮ ಸೇವಾ ಅವಧಿಯಲ್ಲಿನ ಅನುಭವ ವ್ಯಕ್ತಪಡಿಸಿದರು. ಈ ಸಮಯದಲ್ಲಿ ಧರ್ಮದರ್ಶಿ ಮಂಡಳಿಯ ಅಧ್ಯಕ್ಷ ರವೀಂದ್ರ. ಜಿ. ನಾಯ್ಕ, ಉಪಾಧ್ಯಕ್ಷ ಸುದೇಶ. ಜಿ. ಜೋಗಳೇಕರ, ಧರ್ಮದರ್ಶಿ ಸುಧೀರ. ಎಸ್. ಹಂದ್ರಾಳ ಹಾಗೂ ಶಿವಾನಂದ. ಎಸ್. ಶೆಟ್ಟಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ. ಜಿ. ನಾಯ್ಕ ಮತ್ತು ಎಲ್ಲ ಸಿಬ್ಬಂದಿಗಳು ಉಪಸ್ಥಿತರಿದ್ದರು.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top