• Slide
    Slide
    Slide
    previous arrow
    next arrow
  • ರಾಷ್ಟ್ರೀಯತೆ ಬಿತ್ತುವ ಯಾವುದೇ ಸಂಸ್ಥೆಗಳಿಗೂ ಅನುಮತಿ ಕೊಡುತ್ತೇವೆ: ಸಚಿವ ಪೂಜಾರಿ

    300x250 AD

    ಕಾರವಾರದ: ವಸತಿಶಾಲೆಗಳಲ್ಲಿ ಕಾರ್ಯಕ್ರಮ ಅಥವಾ ಶಿಬಿರ ನಡೆಸಲು ರಾಷ್ಟ್ರೀಯತೆಗೆ ಸಂಬಂಧಿಸಿದಂತೆ ಯಾವುದೇ ಉತ್ತಮ ಸಂದೇಶ ಕೊಡುವ ಯಾವುದೇ ಸಂಸ್ಥೆಗಳಿದ್ದರೂ ಅನುಮತಿ ಕೊಡುತ್ತೇವೆ. ನಿಷೇಧಿತ ಯಾವುದೇ ಸಂಸ್ಥೆಗಳಿಗೆ ಅನುಮತಿ ನೀಡುವುದಿಲ್ಲ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಪ್ರತಿಕ್ರಿಯೆ ನೀಡಿದ್ದಾರೆ.

    ಇಲ್ಲಿ ಮಾತನಾಡಿದ ಅವರು, ದಸರಾ ರಜೆ ಸಮಯದಲ್ಲಿ ರಾಜ್ಯದ ಎಲ್ಲ ಶಾಲೆಗಳಿಗೆ ರಜೆ ಕೊಡುತ್ತೇವೆ. ರಜೆ ಸಂದರ್ಭದಲ್ಲಿ ವ್ಯಕ್ತಿತ್ವ ವಿಕಸನ ಶಿಬಿರ ನಡೆಸಲು ಎನ್‌ಎಸ್‌ಎಸ್‌ನಂತೆ ಅನೇಕ ಸಂಘ- ಸಂಸ್ಥೆಗಳು ಕೂಡ ಅನುಮತಿ ಕೇಳುತ್ತವೆ. ದೇಶ ಮೊದಲು ಎನ್ನುವ ಯಾವುದೇ ಸಂಸ್ಥೆಗೆ ಅವಕಾಶ ಕೊಡುತ್ತೇವೆ, ಇದು ಮೊದಲಿನಿಂದಲೂ ವಾಡಿಕೆ ಎಂದರು.

    300x250 AD

    ಆರ್‌ಎಸ್‌ಎಸ್ ಶಿಬಿರ ನಡೆಸಲು ನಾವು ಶಾಲೆಗಳನ್ನು ಕೊಟ್ಟಿಲ್ಲ. ಹೀಗಾಗಿ ಅದು ತಪ್ಪೋ, ಸರಿಯೋ ಎನ್ನುವ ಪ್ರಶ್ನೆಯೇ ಬರುವುದಿಲ್ಲ. ಟೀಕೆ ಮಾಡುವವರು ಇದರ ಬಗ್ಗೆ ಸರಿಯಾದ ಮಾಹಿತಿ ತಿಳಿದು ಟೀಕೆ ಮಾಡಲಿ ಎಂದಿದ್ದಾರೆ.

    Share This
    300x250 AD
    300x250 AD
    300x250 AD
    Leaderboard Ad
    Back to top