• Slide
    Slide
    Slide
    previous arrow
    next arrow
  • ಜನಮನ ಬೆಸೆಯಲು ರಾಹುಲ್ ಭಾರತ್ ಜೋಡೋ ಯಾತ್ರೆ: ದೇಶಪಾಂಡೆ

    300x250 AD

    ಹಳಿಯಾಳ: ದೇಶದಲ್ಲಿ ನಿರ್ಮಾಣವಾಗಿರುವ ಅಸಹಿಷ್ಣುತೆಯನ್ನು ಹೋಗಲಾಡಿಸಿ, ಜನರ ಮನಸ್ಸುಗಳನ್ನು ಮತ್ತೆ ಬೆಸೆಯಬೇಕು ಎಂಬ ಉದ್ದೇಶದಿಂದ ರಾಹುಲ್ ಗಾಂಧಿಯವರು ಭಾರತ್ ಜೋಡೋ ಯಾತ್ರೆ ಮಾಡುತ್ತಿದ್ದಾರೆ. ಅವರ ಯಾತ್ರೆಗೆ ಜನರಿಂದ ಅಭೂತಪೂರ್ವ ಸ್ಪಂದನೆ ಸಿಗುತ್ತಿದೆ ಎಂದು ಮಾಜಿ ಸಚಿವ ಹಾಗೂ ಇಲ್ಲಿನ ಶಾಸಕ ಆರ್.ವಿ.ದೇಶಪಾಂಡೆ ಹೇಳಿದರು.

    ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದಲ್ಲಿ ನಡೆಯುತ್ತಿರುವ ಅಸಹನೀಯ ಬೆಳವಣಿಗೆಗಳು ಜನರಲ್ಲಿ ಧರ್ಮ- ಧರ್ಮದ ನಡುವಿನ ಅಂತರವನ್ನು ಹೆಚ್ಚಿಸುತ್ತಿವೆ. ಅಂತಃಕಲಹ, ಕೋಮುಗಲಭೆಗಳು ದಿನನಿತ್ಯ ಹೆಚ್ಚಾಗುತ್ತಿವೆ. ಇವೆಲ್ಲದರಿಂದ ಜನರು ತೀರಾ ತೊಂದರೆ ಅನುಭವಿಸುತ್ತಿದ್ದಾರೆ. ಆದ್ದರಿಂದ ರಾಹುಲ್ ಗಾಂಧಿಯವರು ಭಾರತದ ಯಾತ್ರೆಯನ್ನು ಕನ್ಯಾಕುಮಾರಿಯಿಂದ ಕಾಶ್ಮೀರದ ತನಕ ಹಮ್ಮಿಕೊಂಡಿದ್ದಾರೆ. ಜನರಲ್ಲಿ ಪ್ರೀತಿ- ವಿಶ್ವಾಸ, ಸೌಹಾರ್ದತೆ ಬೆಳೆಯಲಿ ಎನ್ನುವ ಉದ್ದೇಶದಿಂದ ಅವರು 3670 ಕಿ.ಮೀ. ಪಾದಯಾತ್ರೆ ಹಮ್ಮಿಕೊಂಡಿದ್ದಾರೆ ಎಂದರು.

    ದೇಶದಲ್ಲಿ ದಿನದಿಂದ ದಿನಕ್ಕೆ ನಿರುದ್ಯೋಗ ಸಮಸ್ಯೆ ಹೆಚ್ಚಾಗುತ್ತಿದೆ. ಯುವಕರು ತಪ್ಪು ದಾರಿ ಹಿಡಿಯುತ್ತಿದ್ದಾರೆ. ಬೆಲೆ ಏರಿಕೆ ದಿನದಿಂದ ದಿನಕ್ಕೆ ಗಗನಕ್ಕೇರಿದೆ. ಜನರು ತತ್ತರಿಸಿ ಹೋಗುತ್ತಿದ್ದಾರೆ. ಈ ಎಲ್ಲಾ ಕಾರಣಗಳಿಂದಾಗಿ ರಾಹುಲ್ ಗಾಂಧಿಯವರು ದೇಶಾದ್ಯಂತ ಪಾದಯಾತ್ರೆ ಕೈಗೊಂಡಿದ್ದಾರೆ. ಉತ್ತರ ಕನ್ನಡ ಜಿಲ್ಲೆಯಿಂದ ಪಾದಯಾತ್ರೆ ಮಾಡಲೆಂದು ದೊಡ್ದ ಸಂಖ್ಯೆಯಲ್ಲಿಯೇ ಕಾರ್ಯಕರ್ತರು, ಮುಖಂಡರು ಭಾಗವಹಿಸಲಿದ್ದಾರೆ. ಈ ವಿಷಯದಲ್ಲಿ ನಾಗರೀಕ ಮಹಿಳೆಯರ ಸಹಕಾರ ದೊರೆಯಲಿದೆ ಎಂದರು.

    300x250 AD

    ನೂತನ ಶಿಕ್ಷಣ ನೀತಿ ಜಾರಿಯಾದ ದಿನದಿಂದ ಹೊಸ ಪುಸ್ತಕಗಳು ಬಂದಿಲ್ಲ. ಆದರೆ ವಿ.ಆರ್.ದೇಶಪಾಂಡೆ ಮೆಮೋರಿಯಲ್ ಟ್ರಸ್ಟ್ ವತಿಯಿಂದ ಪುಸ್ತಕ ಖರೀದಿಗೆ ದಾಂಡೇಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ 50,000 ಮತ್ತು ಜೊಯಿಡಾ ಕಾಲೇಜಿಗೆ 25,000 ನೀಡಿದ್ದೇನೆ. ಕರ್ನಾಟಕದಲ್ಲಿ ಭ್ರಷ್ಟಾಚಾರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ ಮತ್ತು ಅಭಿವೃದ್ಧಿ ಕೆಲಸಗಳು ಮಂದಗತಿಯಲ್ಲಿ ನಡೆಯುತ್ತಿದೆ. ಇದು ಕೇವಲ ಜಾಹೀರಾತುಗಳ ಸರ್ಕಾರವಾಗಿದೆ ಹೊರತು ಅಭಿವೃದ್ಧಿಯ ಸರ್ಕಾರವಾಗಿ ಉಳಿದಿಲ್ಲ. ಜಿಲ್ಲೆಯ ಕೆಲವು ತಾಲೂಕುಗಳಲ್ಲಿ ತಹಶೀಲ್ದಾರರ ಹುದ್ದೆಗಳು ಖಾಲಿ ಇವೆ. ಈ ಕುರಿತು ಸಂದೇಶವನ್ನು ಕೂಡ ನಾನು ಮುಖ್ಯಮಂತ್ರಿಗಳಿಗೆ ರವಾನಿಸಿದ್ದೇನೆ. ಆದರೂ ಉಪಯೋಗ ಆಗುತ್ತಿಲ್ಲ. ಇದು ಕೂಡ ಬೇಸರದ ಸಂಗತಿ, ದುರ್ದೈವ ಎಂದು ಹೇಳಿದರು.

    Share This
    300x250 AD
    300x250 AD
    300x250 AD
    Leaderboard Ad
    Back to top