Slide
Slide
Slide
previous arrow
next arrow

ಡಬಲ್ ಇಂಜಿನ್ ಸರಕಾರ ಇದ್ದರೂ ರೈತರ ಸಮಸ್ಯೆಗೆ ಪರಿಹಾರ ಸಿಕ್ಕಿಲ್ಲ: ಕೆ.ಯಾದವ ಶೆಟ್ಟಿ

300x250 AD

ಅಂಕೋಲಾ: ಡಬಲ್ ಇಂಜಿನ್ ಸರಕಾರ ಇದ್ದರೂ ಭೂಮಿ ಪ್ರಶ್ನೆ ಬಗೆಹರಿದಿಲ್ಲ. ತಲೆ ತಲಾಂತರದಿAದ ವಾಸವಿರುವ ಅರಣ್ಯವಾಸಿಗಳಿಗೆ ಹಕ್ಕುಪತ್ರ ಸಿಕ್ಕಿಲ್ಲ. ಉತ್ತರ ಕನ್ನಡ ಜಿಲ್ಲೆಯಲ್ಲಿ 85 ಸಾವಿರ ಕುಟುಂಬಗಳು ಹಕ್ಕುಪತ್ರಕ್ಕೆ ಅರ್ಜಿ ಹಾಕಿಕೊಂಡು ಕಾಯುತ್ತಿದ್ದಾರೆ. 75 ವರ್ಷದ ಮಾನದಂಡ ಹೇರಿ ಅರ್ಜಿಗಳನ್ನು ತಿರಸ್ಕರಿಸಲಾಗುತ್ತಿದೆ. ಇದರಿಂದ ಬುಡಕಟ್ಟು ಜನರಿಗೂ ಮತ್ತು ಇತರೆ ಅರಣ್ಯ ವಾಸಿಗಳಿಗೂ ತೀವ್ರ ಅನ್ಯಾಯವಾಗುತ್ತದೆ ಎಂದು ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ಯಾದವ ಶೆಟ್ಟಿ ಹೇಳಿದರು.

ಪಟ್ಟಣದ ರೈತ ಭವನದಲ್ಲಿ ನಡೆದ ಕರ್ನಾಟಕ ಪ್ರಾಂತ ರೈತ ಸಂಘದ 5ನೇ ಜಿಲ್ಲಾ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು. ರೈಲು, ವಿಮಾನ, ಬ್ಯಾಂಕು, ವಿಮೆ, ವಿದ್ಯುತ್, ಆರೋಗ್ಯ, ಶಿಕ್ಷಣ ಹೀಗೆ ಎಲ್ಲವನ್ನೂ ಖಾಸಗೀಕರಣ ಮಾಡಲು ಹೊರಟಿರುವ ಕೇಂದ್ರ ಸರಕಾರ ಅಂಬಾನಿ, ಅದಾನಿಗೆ ಸಾಲ ಮನ್ನಾ ಮಾಡುತ್ತದೆ. ಆದರೆ ರೈತರ ಸಾಲಮನ್ನಾ ಮಾಡಲು ಮುಂದಾಗಿಲ್ಲ. ರೈತರು ಬೆಳೆದ ಬೆಳೆಗೆ ಬೆಂಬಲ ಬೆಲೆ ನೀಡಿ ಖರೀದಿಸುವ ಖಾತ್ರಿ ನೀಡುತ್ತಿಲ್ಲ. ಅಡಕೆಯನ್ನು ವಿದೇಶದಿಂದ ಆಮದು ಮಾಡಿಕೊಳ್ಳಲು ಅನುಮತಿ ನೀಡಿದೆ. ಇದರಿಂದ ಅಡಕೆ ಬೆಳೆಯುವ ರೈತರು ಸಹ ತೀವ್ರ ಸಂಕಷ್ಟಕ್ಕೆ ಒಳಗಾಗಲಿದ್ದಾರೆ. ಸರಕಾರದ ನೀತಿಯಿಂದ ಎಲ್ಲಾ ಅಗತ್ಯ ವಸ್ತುಗಳ ಬೆಲೆ ಏರಿಕೆ, ಆಹಾರ ಧಾನ್ಯಗಳ ಮೇಲೆ ಜಿ.ಎಸ್.ಟಿ. ಹೇರಿಕೆ, ಸಾಮಾನ್ಯ ಜನರ ಬದುಕು ದುಸ್ತರವಾಗುತ್ತಿದೆ ಎಂದು ಹೇಳಿದರು.

ಸಾಹಿತಿ ಪ್ರೊ.ಮೋಹನ ಹಬ್ಬು ಮಾತನಾಡಿ, ದೇಶದ ಬೆನ್ನೆಲುಬಾದ ರೈತನಿಗೆ ಬೇಕಾದ ಸೌಲಭ್ಯ ಒದಗಿಸಲು ಇಲ್ಲಿಯವರೆಗೆ ನಮ್ಮ ಸರಕಾರಗಳಿಗೆ ಸಾಧ್ಯವಾಗಿಲ್ಲ. ಅನ್ನದಾತ ಎನ್ನುತ್ತೇವೆ. ಆದರೆ ಅವನ ರಕ್ಷಣೆಗೆ ಮುಂದಾಗುತ್ತಿಲ್ಲ. ಕೃಷಿ ಅವಲಂಬಿತ ದೇಶವಾದ ಭಾರತದಲ್ಲಿ ರೈತರನ್ನು ಮರೆಯಲು ಸಾಧ್ಯವಿಲ್ಲ. ರಾಷ್ಟçಪತಿ ಎಷ್ಟು ಮುಖ್ಯವೋ, ದೇಶಕ್ಕೆ ರೈತನೂ ಅಷ್ಟೇ ಮುಖ್ಯ ಎಂದರು.

300x250 AD

ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ಶಾಂತಾರಾಮ ನಾಯಕ ಧ್ವಜಾರೋಹಣ ನೆರವೇರಿಸಿದರು. ಸಿಐಟಿಯು ಜಿಲ್ಲಾಧ್ಯಕ್ಷ ತಿಲಕ ಗೌಡ, ಕೃಷಿ ಕೂಲಿಕಾರರ ಸಂಘದ ಅಧ್ಯಕ್ಷ ಭೀಮಣ್ಣ ಭೋವಿ ಮಾತನಾಡಿದರು. ಗಂಗಾ ನಾಯ್ಕ, ಆರ್.ಎಂ. ಮುಲ್ಲಾ, ತಿಮ್ಮಪ್ಪ ಗೌಡ ಉಪಸ್ಥಿತರಿದ್ದರು. ಕರ್ನಾಟಕ ಪ್ರಾಂತ ರೈತ ಸಂಘದ ತಾಲೂಕು ಅಧ್ಯಕ್ಷ ಗೌರೀಶ ನಾಯಕ ಸ್ವಾಗತಿಸಿದರು. ಪ್ರೇಮಾನಂದ ವೇಳಿಪ ನಿರ್ವಹಿಸಿದರು. ತಾಲೂಕು ಕಾರ್ಯದರ್ಶಿ ಸಂತೋಷ ನಾಯ್ಕ ವಂದಿಸಿದರು.

Share This
300x250 AD
300x250 AD
300x250 AD
Back to top