ಕಾರವಾರ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಡಿ.3ರ ವಿಶ್ವ ವಿಕಲಚೇತನರ ದಿನಾಚರಣೆಯಂದು ನೀಡಲಾಗುವ ರಾಜ್ಯ ಪ್ರಶಸ್ತಿಗಾಗಿ ಅಂಗವಿಕಲರ ಕಲ್ಯಾಣ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿರುವ ಸಂಸ್ಥೆಗಳಿಗೆ, ವಿಶಿಷ್ಟ ಸಾಧನಗೈದಿರುವ ವ್ಯಕ್ತಿ, ಸಂಸ್ಥೆ ಮತ್ತು ವಿಶೇಷ ಶಾಲೆಗಳಿಗೆ, ವಿಕಲಚೇತನರಿಗಾಗಿ ನಡೆಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳಿಗೆ ಹಾಗೂ ಸರ್ಕಾರದ ವತಿಯಿಂದ ನಿರ್ವಹಿಸುತ್ತಿರುವ ವಿಶೇಷ ಶಾಲೆಗಳಲ್ಲಿ 15 ವರ್ಷಕ್ಕೂ ಮೇಲ್ಪಟ್ಟು ಸೇವೆ ಸಲ್ಲಿಸಿರುವ/ ಸಲ್ಲಿಸುತ್ತಿರುವ ವಿಶೇಷ ಶಿಕ್ಷಕರುಗಳಿಂದ ಅರ್ಜಿ ಅಹ್ವಾನಿಸಲಾಗಿದೆ.
ಅರ್ಹ ಅಭ್ಯರ್ಥಿಗಳು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಇಲಾಖೆಯ ವೆಬ್‌ಸ್ಶೆಟ್ http://www.dwdsc.kar.nic.in ನಲ್ಲಿ ಅರ್ಜಿ ನಮೂನೆ ಪಡೆದು ಪೂರ್ಣವಾಗಿ ಭರ್ತಿ ಮಾಡಿದ ಅರ್ಜಿಗಳನ್ನು ಅ. 19. ರೊಳಗೆ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಕಲ್ಯಾಣಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಜಿಲ್ಲಾ ಬಾಲಭವನ ಬಿಲ್ಡಿಂಗ್ ಕಾರವಾರ ಅಥವಾ ದೂರವಾಣಿ ಸಂಖ್ಯೆ 08382200758 ಗೆ ಸಂಪರ್ಕಿಸಿ ಎಂದು ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.