Slide
Slide
Slide
previous arrow
next arrow

2023ರ ಚುನಾವಣೆಯಲ್ಲಿ ಸ್ಪರ್ಧೆ ಖಚಿತ: ವಿ.ಎಸ್.ಪಾಟೀಲ್

300x250 AD

ದಾಂಡೇಲಿ: ಮುಂಬರಲಿರುವ 2023ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ ಖಚಿತ ಎಂದು ಯಲ್ಲಾಪುರ-ಮುಂಡಗೋಡ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಹಾಗೂ ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ಮಾಜಿ ಅಧ್ಯಕ್ಷ ವಿ.ಎಸ್.ಪಾಟೀಲ್ ಸ್ಪಷ್ಟಪಡಿಸಿದ್ದಾರೆ.

ಕಾರ್ಯಕ್ರಮದ ನಿಮಿತ್ತ ಇಲ್ಲಿಗೆ ಆಗಮಿಸಿದ್ದ ಸಂದರ್ಭ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ನಾನಾಗಿ ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ಅಧ್ಯಕ್ಷ ಹುದ್ದೆ ರಾಜೀನಾಮೆ ನೀಡಿಲ್ಲ. ಸರಕಾರವೆ ನನ್ನನ್ನು ಹುದ್ದೆಯಿಂದ ಕೈಬಿಟ್ಟಿದೆ. ನಾನು ಇನ್ನೂ ಬಿಜೆಪಿ ಪಕ್ಷದಲ್ಲೆ ಇದ್ದೇನೆ. ಆದರೆ ಮುಂಬರಲಿರುವ ವಿಧಾನಸಭಾ ಚುನಾವಣೆಯಲ್ಲಿ ಯಲ್ಲಾಪುರ- ಮುಂಡಗೋಡ ವಿಧಾನಸಭಾ ಕ್ಷೇತ್ರದಿಂದ ನನ್ನ ಸ್ಪರ್ಧೆ ಖಚಿತ ಎಂದರು.

ಯಾವ ಪಕ್ಷದಲ್ಲಿ ಸ್ಪರ್ಧೆ ಎಂದ ಮಾಧ್ಯಮದವರ ಪ್ರಶ್ನೆಗೆ, ಅಭಿಮಾನಿಗಳ, ಕಾರ್ಯಕರ್ತರ ಅಭಿಪ್ರಾಯವನ್ನು ಸಂಗ್ರಹಿಸಿ ಸೂಕ್ತ ಸಮಯದಲ್ಲಿ ನಿರ್ಧಾರ ತೆಗೆದುಕೊಳ್ಳುವುದು, ಅಲ್ಲಿಯವರೆಗೆ ಕಾದು ನೋಡಿ ಎಂದಷ್ಟೆ ಉತ್ತರಿಸಿದರು.

300x250 AD

Share This
300x250 AD
300x250 AD
300x250 AD
Back to top