
ಯಲ್ಲಾಪುರ; ಶಾಸಕ ಶಿವರಾಮ್ ಹೆಬ್ಬಾರ್ ಗೆ ನೂತನ ಸಚಿವ ಸಂಪುಟದಲ್ಲಿ ಮತ್ತೊಮ್ಮೆ ಸಚಿವ ಸ್ಥಾನ ಸಿಕ್ಕ ಹಿನ್ನೆಲೆಯಲ್ಲಿ ಯಲ್ಲಾಪುರದಲ್ಲಿ ಬಿಜೆಪಿ ವತಿಯಿಂದ ಸಂಭ್ರಮಾಚರಣೆ ನಡೆಸಲಾಯಿತು.
ಪಟ್ಟಣದ ಅಂಬೇಡ್ಕರ್ ವೃತ್ತದ ಬಳಿ ಬಿಜೆಪಿ ಕಾರ್ಯ ಕರ್ತರು ಹಾಗೂ ಹೆಬ್ಬಾರ್ ಅಭಿಮಾನಿಗಳು ಪಟಾಕಿ ಸಿಡಿಸಿ ಸಿಹಿ ಹಂಚುವ ಮೂಲಕ ಸಂಭ್ರಮಾಚರಣೆ ನಡೆಸಿದರು.
ಈ ಸಂದರ್ಭದಲ್ಲಿ ಮಂಡಲಾಧ್ಯಕ್ಷ ಗೋಪಾಲಕೃಷ್ಣ ಎನ್ ಗಾಂವ್ಕರ್, ಪ್ರಧಾನ ಕಾರ್ಯದರ್ಶಿ ಡಾ. ರವಿ ಭಟ್ ಬರಗದ್ದೆ, ಯುವಮೋರ್ಚಾ ಅಧ್ಯಕ್ಷ ಪ್ರದೀಪ್ ಯಲ್ಲಾಪುರಕರ್, ಪಟ್ಟಣ ಪಂಚಾಯತ ಸದಸ್ಯ ಅಮಿತ್ ಅಂಗಡಿ, ಸೋಮೇಶ್ವರ ನಾಯ್ಕ, ನಾಗರಾಜ ಅಂಕೋಲೆಕರ್ ಹಾಗೂ ಪಕ್ಷದ ವಿವಿಧಸ್ತರದ ಪದಾಧಿಕಾರಿಗಳು, ಕಾರ್ಯಕರ್ತರು ಅಭಿಮಾನಿಗಳು ಉಪಸ್ಥಿತರಿದ್ದರು.