• Slide
    Slide
    Slide
    previous arrow
    next arrow
  • ಪೋಕ್ಸೋ ಪ್ರಕರಣದ ಆರೋಪಿ ಆತ್ಮಹತ್ಯೆಗೆ ಶರಣು; ಪ್ರಕರಣ ದಾಖಲು

    300x250 AD

    ಭಟ್ಕಳ : ತಾಲೂಕಿನ ಹಡೀಲ್ ಸಬ್ಬತ್ತಿಯಲ್ಲಿ ವ್ಯಕ್ತಿಯೋರ್ವ  ಮರಕ್ಕೆ ನೇಣು ಬಿಗಿದುಕೊಂಡು  ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಕಳೆದ 15 ದಿನದಿಂದ ಯಾವುದೊ ವಿಷಯವನ್ನು ಮನಸ್ಸಿಗೆ ಹಚ್ಚಿಕೊಂಡು, ಜೀವನದಲ್ಲಿ ಜಿಗುಪ್ಪೆಗೊಂಡು ಮನೆಯ ಹತ್ತಿರದಲ್ಲಿರುವ ಗೇರು ಪ್ಲಾಂಟೇಷನ್‌ನಲ್ಲಿ  ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

    ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ನಾರಾಯಣ ಈರಪ್ಪ ನಾಯ್ಕ (64)  ಎಂದು ಗುರುತಿಸಲಾಗಿದ್ದು ಈತನ ಮೇಲೆ 2014 ರಲ್ಲಿ ಭಟ್ಕಳ ಗ್ರಾಮೀಣ ಠಾಣೆಯಲ್ಲಿ ಪೋಕ್ಸೋ  ಪ್ರಕರಣ ದಾಖಲಾಗಿತ್ತು. ಪ್ರಕರಣವು ಕಾರವಾರದ ಜಿಲ್ಲಾ ಸತ್ರ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದ್ದು ಈ ವಿಷಯವನ್ನು ಮನಸ್ಸಿಗೆ ಹಚ್ಚಿಕೊಂಡು ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬ ಶಂಕೆ ವ್ಯಕ್ತಪಡಿಸಲಾಗಿದೆ.
    ಈತನ ಆತ್ಮಹತ್ಯೆ ಘಟನೆಯ ಬಗ್ಗೆ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top