Slide
Slide
Slide
previous arrow
next arrow

ರಾಷ್ಟ್ರೀಯ ಅಥ್ಲೆಟಿಕ್ಸ್ ಕ್ರೀಡಾಕೂಟಕ್ಕೆ ಸಿಮಿ ಆಯ್ಕೆ

300x250 AD

ಅಂಕೋಲಾ: ಉತ್ತರ ಕನ್ನಡ ಜಿಲ್ಲಾ ಅಥ್ಲೆಟಿಕ್ಸ್ ಸಂಸ್ಥೆಯ ಕ್ರೀಡಾಪಟು ಸಿಮಿ ಎನ್.ಎಸ್. ಮುಂಡಗೋಡ ಇವಳು 62ನೇ ಮುಕ್ತ ರಾಷ್ಟ್ರೀಯ ಅಥ್ಲೆಟಿಕ್ಸ್ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾಳೆ.
15-19ರ ಅಕ್ಟೋಬರ್ 2022ರಲ್ಲಿ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆಯುವ ಕ್ರೀಡಾಕೂಟದಲ್ಲಿ ಕರ್ನಾಟಕ ರಾಜ್ಯ ತಂಡವನ್ನು ಪ್ರತಿನಿಧಿಸುತ್ತಿದ್ದಾಳೆ. ಈಗಾಗಲೇ ಇವಳು 2022ರ ಕಾಮನ್‌ವೆಲ್ತ್ ಗೇಮ್ಸ್ನಲ್ಲಿ ಭಾಗವಹಿಸಿದ್ದು, ಕಳೆದ ತಿಂಗಳು ಗುಜರಾತಿನಲ್ಲಿ ನಡೆದ 36ನೇ ರಾಷ್ಟ್ರೀಯ ಕ್ರೀಡಾಕೂಟದಲ್ಲೂ ಸಹ ಭಾಗವಹಿಸಿ 100 ಮೀ. ಹಾಗೂ 4*100 ಮೀ. ರೀಲೆಯಲ್ಲಿ ವಿಶೇಷ ಸಾಧನೆ ಮಾಡಿ ನಮ್ಮ ಜಿಲ್ಲೆಗೆ ಕೀರ್ತಿಯನ್ನು ತಂದಿರುತ್ತಾಳೆ ಎಂದು ಜಿಲ್ಲಾ ಅಥ್ಲೆಟಿಕ್ಸ್ ಸಂಸ್ಥೆಯ ಕಾರ್ಯದರ್ಶಿ ಕೆ.ಆರ್.ನಾಯಕ ಬೇಲೆಕೇರಿ, ಅಧ್ಯಕ್ಷ ಸದಾನಂದ ನಾಯ್ಕ ಸಂಸ್ಥೆಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top