ಹೊನ್ನಾವರ: ತಾಲೂಕಿನ ನಗರಬಸ್ತಿಕೇರಿ ಗ್ರಾಮದ ಖಂಡೋಡಿ ಗ್ರಾಮದಲ್ಲಿ ಅ.15ರಂದು ಜಿಲ್ಲಾಧಿಕಾರಿಗಳಾದ ಮುಲ್ಲೈ ಮುಗಿಲನ್ ಅವರಿಂದ ಗ್ರಾಮ ವಾಸ್ಥವ್ಯ ನಡೆಯಲಿದೆ ಎಂದು ತಹಶೀಲ್ದಾರ ನಾಗರಾಜ ನಾಯ್ಕಡ್ ಮಾಹಿತಿ ನೀಡಿದ್ದಾರೆ.
ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಎನ್ನುವ ಸರ್ಕಾರದ ವಿನೂತನ ಕಾರ್ಯಕ್ರಮವು ತಾಲೂಕಿನ ನಗರಬಸ್ತಿಕೇರಿ ಗ್ರಾ.ಪಂ. ವ್ಯಾಪ್ತಿಯ ಖಂಡೋಡಿಯ ಮಹಾವಿಷ್ಣು ದೇವಾಲಯದ ಸಭಾಭವನದಲ್ಲಿ ನಡೆಯಲಿದೆ. ಇಲಾಖೆಯ ಅಧಿಕಾರಿಗಳು ಈ ಸಭೆಯಲ್ಲಿ ಉಪಸ್ಥಿತರಿರುವುದರಿಂದ ಸಾರ್ವಜನಿಕರು ಆಗಮಿಸಿ ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ. ತಾಲೂಕಿನ ವಿವಿಧ ಇಲಾಖೆಯ ಅಧಿಕಾರಿಗಳು ಸೂಕ್ತ ದಾಖಲಾತಿಯೊಂದಿಗೆ ಕಡ್ಡಾಯವಾಗಿ ಹಾಜರಿರುವಂತೆ ಮನವಿ ಮಾಡಿದ್ದಾರೆ.
ಅ.15ರಂದು ಖಂಡೋಡಿ ಗ್ರಾಮದಲ್ಲಿ ಡಿಸಿ ವಾಸ್ತವ್ಯ
