Slide
Slide
Slide
previous arrow
next arrow

ಮೀಸಲಾತಿ ವಿಚಾರದಲ್ಲಿ ದಿಟ್ಟ ನಿರ್ಧಾರ ತೆಗೆದುಕೊಂಡಿದ್ದೇವೆ: ಬೊಮ್ಮಾಯಿ

300x250 AD

ಬೆಂಗಳೂರು: ಮೀಸಲಾತಿ ಸಂಬಂಧಿತ ಜನರ ಹಲವು ದಶಕಗಳ ಬೇಡಿಕೆಯನ್ನು ಬಿಜೆಪಿ ಸರಕಾರ ಈಡೇರಿಸಿದೆ. ಶಿಕ್ಷಣ ವಂಚಿತರು ಮತ್ತು ಸಾಮಾಜಿಕವಾಗಿ ಹಿಂದುಳಿದವರಿಗೆ ಶಿಕ್ಷಣ ಮತ್ತು ಉದ್ಯೋಗಾವಕಾಶದ ಅವಕಾಶ ನೀಡಿ ಸ್ವಾವಲಂಬನೆಯ- ಸ್ವಾಭಿಮಾನಿ ಬದುಕಿಗಾಗಿ ಈ ನಿರ್ಧಾರ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮನವಿ ಮಾಡಿದರು.

ವಿಜಯನಗರ ಜಿಲ್ಲೆಯ ಹೂವಿನಹಡಗಲಿಯಲ್ಲಿ ಇಂದು ‘ಜನಸಂಕಲ್ಪ’ ಯಾತ್ರೆಯ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಹಲವಾರು ದಶಕಗಳ ಕಾಲ ಅಧಿಕಾರದಲ್ಲಿತ್ತು. ಯಾಕೆ ಮೀಸಲಾತಿ ವಿಚಾರದಲ್ಲಿ ಇಂಥ ದಿಟ್ಟ ನಿರ್ಧಾರ ಮಾಡಿಲ್ಲ ಎಂದು ಅವರು ಪ್ರಶ್ನಿಸಿದರು. ಕಾಂಗ್ರೆಸ್ ಪಕ್ಷದವರು ದೀನ ದಲಿತರು ಮತ್ತು ಎಸ್‍ಸಿ, ಎಸ್ಟಿ ಸಮುದಾಯದವರ ವಿರೋಧಿಗಳು ಎಂದು ಆಕ್ಷೇಪಿಸಿದರು.

ರೈತರ ಮಕ್ಕಳಿಗೆ ವಿದ್ಯಾನಿಧಿಯನ್ನು ಮೊದಲ ಬಾರಿಗೆ ಕೊಡಲಾಗಿದೆ. ರೈತ ಕೃಷಿ ಕೂಲಿಕಾರರು ಸೇರಿ ಅನೇಕ ಸಮುದಾಯಗಳಿಗೆ ಇದನ್ನು ವಿಸ್ತರಿಸಲಾಗಿದೆ. ಉದ್ಯೋಗ ಹೆಚ್ಚಳಕ್ಕೆ ನಾವು ಆದ್ಯತೆ ಕೊಡುತ್ತಿದ್ದೇವೆ. 5 ಲಕ್ಷ ಮಹಿಳೆಯರಿಗೆ, 5 ಲಕ್ಷ ಯುವಕರಿಗೆ ಕೆಲಸ ಸಿಗುವಂತೆ ಮಾಡುತ್ತಿದ್ದೇವೆ ಎಂದು ವಿವರಿಸಿದ ಅವರು, ಎಲ್ಲ ವರ್ಗದವರಿಗೆ ನ್ಯಾಯ ಕೊಡುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ ಎಂದರು.

ಕಾಂಗ್ರೆಸ್ ಆಡಳಿತಾವಧಿಯಲ್ಲಿ ಸಾಮಾಜಿಕ ನ್ಯಾಯವು ಕೇವಲ ಭಾಷಣದ ಸರಕಾಗಿತ್ತು ಹಾಗೂ ಮತಬ್ಯಾಂಕ್ ಮಾಡಲು ಇದನ್ನು ಬಳಸಲಾಗುತ್ತಿತ್ತು ಎಂದು ಆಕ್ಷೇಪಿಸಿದರು. ಕನಕದಾಸರ ಕ್ಷೇತ್ರದ ಅಭಿವೃದ್ಧಿಗೆ ನಮ್ಮ ಸರಕಾರ ಅನುದಾನ ಕೊಟ್ಟಿದೆ ಎಂದರು.

ಸೋನಿಯಾ ಗಾಂಧಿ ಅವರಿಗೆ ಬಳ್ಳಾರಿ ಕ್ಷೇತ್ರವು ರಾಜಕೀಯವಾಗಿ ಮರುಜನ್ಮ ಕೊಟ್ಟಿತ್ತು. ಆಗ ಕಾಂಗ್ರೆಸ್ ಸರಕಾರವು ಈ ಭಾಗಕ್ಕೆ ಸಾವಿರಾರು ಕೋಟಿ ಅನುದಾನದ ಭರವಸೆ ಕೊಟ್ಟಿತ್ತು. ಆದರೆ, ಅದನ್ನು ಈಡೇರಿಸಲಿಲ್ಲ ಎಂದು ವಿವರಿಸಿದರು. ಈಗ ಮತ್ಯಾಕೆ ಬಂದಿದ್ದೀರಿ? ಏನು ಸುಳ್ಳು ಹೇಳಲು ಬಂದಿದ್ದೀರಿ? ಎಂದು ಪ್ರಶ್ನಿಸಿದರು. ನಾವೆಲ್ಲರೂ ಜಾಗೃತರಾಗಿದ್ದೇವೆ. ನಿಮ್ಮ ಸುಳ್ಳನ್ನು ನಂಬುವುದಿಲ್ಲ ಎಂಬ ಸಂದೇಶವನ್ನು ಕಾಂಗ್ರೆಸ್ಸಿಗರಿಗೆ ರವಾನಿಸಿ ಎಂದು ಜನರಲ್ಲಿ ಮನವಿ ಮಾಡಿದರು.

ಕರ್ನಾಟಕವನ್ನು ಕಾಂಗ್ರೆಸ್ ಪಕ್ಷ ಲೂಟಿ ಮಾಡಿತ್ತು. ಕಾಂಗ್ರೆಸ್ ನಾಯಕರು ಕರ್ನಾಟಕವನ್ನು ಪೇಟಿಎಂ ಮಾಡಿಕೊಂಡಿದ್ದರು. ಅದೇ ಸಂಬಂಧ ಕಾಂಗ್ರೆಸ್ ಪಕ್ಷದ ರಾಜ್ಯದ ಅಧ್ಯಕ್ಷರು ಈಗ ವಿಚಾರಣೆ ಎದುರಿಸುತ್ತಿದ್ದಾರೆ. ಅವರನ್ನು ನೋಡಿದರೆ ಕನಿಕರ ಎನಿಸುತ್ತದೆ; ನಿಮ್ಮಿಂದ ನಾವು ಪಾಠ ಕಲಿಯಬೇಕಿಲ್ಲ ಎಂದು ಅವರು ತಿಳಿಸಿದರು.

300x250 AD

ರಾಜ್ಯದ ಜನರು ಜಾಗೃತರಾಗಿದ್ದಾರೆ. ನಿಮ್ಮ ಹಳೆಯ ನಾಟಕಗಳನ್ನು ಕರ್ನಾಟಕದ ಜನರು ನಂಬುವುದಿಲ್ಲ. ನುಡಿದಂತೆ ನಡೆದವರಿಗೆ ಮಾತ್ರ ಅವಕಾಶ ಸಿಗಲಿದೆ. ಈ ಭಾಗ್ಯ ಆ ಭಾಗ್ಯ ಎಂದು ತಿಳಿಸಿದರೂ ನಿಮ್ಮನ್ನು ಜನರು ಯಾಕೆ ಮನೆಗೆ ಕಳಿಸಿದ್ದಾರೆ ಎಂದು ಕಾಂಗ್ರೆಸ್ ಮುಖಂಡರಿಗೆ ಪ್ರಶ್ನೆ ಹಾಕಿದರು.

ಅನ್ನ ಭಾಗ್ಯದಲ್ಲಿ ಕನ್ನ ಭಾಗ್ಯ ಇತ್ತು. ಎಸ್‍ಸಿ, ಎಸ್‍ಟಿ ಜನಾಂಗದವರಿಗೆ ಬೋರ್‍ವೆಲ್ ವಿಚಾರದಲ್ಲೂ ಹಗರಣ ಮಾಡಿದ್ದೀರಿ. ಕಾಂಗ್ರೆಸ್ ತಪ್ಪು ಲೆಕ್ಕಾಚಾರ- ಭ್ರಷ್ಟಾಚಾರದಿಂದ ಕರ್ನಾಟಕದ ಅಭಿವೃದ್ಧಿಗೆ ಹಿನ್ನಡೆ ಆಗಿತ್ತು ಎಂದು ತಿಳಿಸಿದರು. ಇಲ್ಲಿನ ಜನಸ್ತೋಮ ನೋಡಿದಾಗ ಇಲ್ಲಿ ಕಮಲದ ಹೂವು ಅರಳುವುದು ಖಚಿತ ಎಂದು ವಿಶ್ವಾಸವಾಗಿದೆ ಎಂದು ನುಡಿದರು. ಒಗ್ಗಟ್ಟಿನಿಂದ ಬಿಜೆಪಿಯನ್ನು ಗೆಲ್ಲಿಸಿ ಎಂದು ಮನವಿ ಮಾಡಿದರು.

ನಮ್ಮ ನಾಯಕರಾದ ಯಡಿಯೂರಪ್ಪ ಅವರ ತಾಂಡ ಅಭಿವೃದ್ಧಿ ನಿಗಮ ಮಾಡಿದ್ದರು. 100 ಕೋಟಿ ರೂಪಾಯಿ ಅನುದಾನ ಕೊಟ್ಟರು. ನಾನು ಈ ನಿಗಮಕ್ಕೆ ಈ ಬಾರಿ 100 ಕೋಟಿ ನೀಡಲಿದ್ದೇನೆ ಎಂದು ತಿಳಿಸಿದರು. ಎಸ್‍ಸಿ, ಎಸ್‍ಟಿ ಸಮುದಾಯಗಳ ಅಭಿವೃದ್ಧಿಗೆ 28 ಸಾವಿರ ಕೋಟಿ ಅನುದಾನವನ್ನು ಕೊಡಲಾಗಿದೆ ಎಂದು ವಿವರಿಸಿದರು. ಸಮಾಜ ಕಲ್ಯಾಣ ಇಲಾಖೆಗೆ 6 ಸಾವಿರ ಕೋಟಿ ಕೊಡಲಾಗಿದೆ ಎಂದರು.

ಹೂವಿನಹಡಗಲಿಯ ಜನರು ಹೂವಿನಂಥವರು ಎಂದು ಮೆಚ್ಚುಗೆ ಸೂಚಿಸಿದರು. ಸಿಂಗಟಾಲೂರು ಏತ ನೀರಾವರಿ ಯೋಜನೆಗೆ ಹೆಚ್ಚಿನ ಮಹತ್ವ ನೀಡಿದ್ದರಿಂದ ಇಲ್ಲಿನ 42 ಸಾವಿರ ಎಕರೆ ಪ್ರದೇಶಕ್ಕೆ ನೀರಾವರಿ ವಕಾಶ ಲಭಿಸಿದೆ. ಈ ಭಾಗದ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆಯನ್ನು ಬಿಜೆಪಿ ನೀಡಿದೆ ಎಂದು ವಿವರಿಸಿದರು.

ಕೃಪೆ :-http://news13.in

Share This
300x250 AD
300x250 AD
300x250 AD
Back to top