
ಕಾರವಾರ: ಜಿಲ್ಲೆಯಲ್ಲಿ ಕರೋನಾ ಸೋಂಕು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೋವಿಡ್ ಸೋಂಕು ಹರಡದಂತೆ ತಡೆಗಟ್ಟಲು ಮುಂಜಾಗ್ರತಾ ಕ್ರಮವಾಗಿ ಮದುವೆ ಸಮಾರಂಭಗಳಲ್ಲಿ 50 ಜನರಿಗೆ ಮಾತ್ರ ಪಾಲ್ಗೊಳ್ಳಲು ಅವಕಾಶವನ್ನು ಕಲ್ಪಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಹಾಗೂ ಧಾರ್ಮಿಕ ಸ್ಥಾನಗಳಲ್ಲಿ ದೈನಂದಿನ ಪೂಜೆ ಹೊರತು ಪಡಿಸಿ ಸೇವಾ ಕಾರ್ಯಕ್ರಮಗಳನ್ನು ನಿಷೇಧಿಸಲಾಗಿದೆ.
ಕೋವಿಡ್ ಮೂರನೇ ಅಲೆ ಹಿನ್ನೆಲೆಯಲ್ಲಿ ಸೋಂಕು ಹರಡದಂತೆ ತಡೆಗಟ್ಟಲು ಈ ಕ್ರಮ ಕೈಗೊಳ್ಳಲಾಗಿದ್ದು, ಸಾರ್ವಜನಿಕರು ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಆದೇಶಿಸಲಾಗಿದೆ.