ಬೆಂಗಳೂರು: ಐದನೇ ವಂದೇ ಭಾರತ್ ಎಕ್ಸ್‌ಪ್ರೆಸ್ – ಸೆಮಿ ಹೈಸ್ಪೀಡ್ ರೈಲಿನ ಸೇವೆಗಳನ್ನು ನವೆಂಬರ್ 10 ರಂದು ಪ್ರಾರಂಭಿಸಲಾಗುತ್ತಿದೆ. ವರದಿಗಳ ಪ್ರಕಾರ, ರೈಲು ಚೆನ್ನೈ-ಬೆಂಗಳೂರು ಮತ್ತು ಮೈಸೂರು ನಡುವೆ ಸುಮಾರು 483 ಕಿ.ಮೀ ಸಂಚರಿಸಲಿದೆ.
ಸೆಮಿ ಹೈಸ್ಪೀಡ್ ರೈಲು ಮುಂದಿನ ನವೆಂಬರ್ 10 ರಂದು ಚೆನ್ನೈ-ಬೆಂಗಳೂರು-ಮೈಸೂರು ಮಾರ್ಗಗಳಲ್ಲಿ ಸಂಚರಿಸಲಿದೆ. ಪ್ರಧಾನಿ ನರೇಂದ್ರ ಮೋದಿ ವಂದೇ ಭಾರತ್ ರೈಲಿಗೆ ನವೆಂಬರ್ 10 ರಂದು ಚಾಲನೆ ನೀಡಲಿದ್ದಾರೆ. ಈ ಮೂಲಕ ದಕ್ಷಿಣ ಭಾರತದ ಎರಡು ಪ್ರಮುಖ ನಗರಗಳು ಹಾಗೂ ರಾಜ್ಯದ ಸಾಂಸ್ಕೃತಿಕ ನಗರವನ್ನು ಈ ರೈಲು ಸಂಪರ್ಕಿಸಲಿದೆ.ಪ್ರಧಾನಿ ನರೇಂದ್ರ ಮೋದಿ ಅವರು ನಿನ್ನೆಯಷ್ಟೇ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯಲ್ಲಿ ನಾಲ್ಕನೇ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸೇವೆಗಳಿಗೆ ಚಾಲನೆ ನೀಡಿದರು.
ಕೃಪೆ:-http://news13.in