Slide
Slide
Slide
previous arrow
next arrow

ಕಾರು ಮತ್ತು ಲಾರಿಯ ಮುಖಾಮುಖಿ ಡಿಕ್ಕಿ: ಇಬ್ಬರಿಗೆ ಗಾಯ

300x250 AD

ಶಿರಸಿ: ತಾಲೂಕಿನ ಗಿಡಮಾವಿನಕಟ್ಟೆ ಬಳಿ ಕಾರು ಮತ್ತು ಲಾರಿಯ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಈರ್ವರಿಗೆ ಗಾಯಗಳಾದ ಘಟನೆ ನಡೆದಿದೆ. ಶಿರಸಿ ಕಡೆಯಿಂದ ಸಿದ್ದಾಪುರ ಕಡೆಗೆ ಹೋಗುತ್ತಿದ್ದ ಕಾರು ಹಾಗೂ ಎದುರಿನಿಂದ ಬರುತ್ತಿದ್ದ ಲಾರಿಯ ನಡುವೆ ಡಿಕ್ಕಿ ಸಂಭವಿಸಿದ್ದು ಇಬ್ಬರಿಗೆ ಗಾಯಗಳಾಗಿವೆ.
ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು ಕಾರಿನಲ್ಲಿದ್ದ ರಾಮಕೃಷ್ಣ ಹೆಗಡೆ ಹಾಗೂ ಪ್ರಕಾಶ ದೇವಾಡಿಗ ಎಂಬುವವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಶಿರಸಿ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

300x250 AD
Share This
300x250 AD
300x250 AD
300x250 AD
Back to top