• Slide
    Slide
    Slide
    previous arrow
    next arrow
  • ವಿದ್ಯಾರ್ಥಿ ವೇತನ ಚೆಕ್ ವಿತರಿಸಿದ ಸುರೇಶ್ಚಂದ್ರ ಹೆಗಡೆ

    300x250 AD

    ಶಿರಸಿ:ತಾಲೂಕಿನ ಜಾನ್ಮನೆ ಹಾಲು ಉತ್ಪಾದಕರ ಸಹಕಾರ ಸಂಘದ ಕಲ್ಯಾಣ ಸಂಘದ ಸದಸ್ಯ ದಿನೇಶ ಹೆಗಡೆ ಪುತ್ರ ನವೀನ ಹೆಗಡೆ 2021-2022 ನೇ ಸಾಲಿನಲ್ಲಿ ನಡೆದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 625 ಕ್ಕೆ 623 ಅಂಕಗಳನ್ನು ಗಳಿಸಿದ್ದು, ಈತನಿಗೆ ಧಾರವಾಡ, ಗದಗ ಮತ್ತು ಉತ್ತರಕನ್ನಡ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ., ಧಾರವಾಡದ ನೌಕರರ ಕಲ್ಯಾಣ ಸಂಘದ ವತಿಯಿಂದ ವಿದ್ಯಾರ್ಥಿ ವೇತನದ ಚೆಕ್ ವಿತರಿಸಲಾಯಿತು.
    ಧಾರವಾಡ, ಗದಗ ಮತ್ತು ಉತ್ತರಕನ್ನಡ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ., ಧಾರವಾಡದ ನೌಕರರ ಕಲ್ಯಾಣ ಸಂಘದ ಅಧ್ಯಕ್ಷ ಹಾಗೂ ಕೆ.ಡಿ.ಸಿ.ಸಿ. ಬ್ಯಾಂಕ್ ಶಿರಸಿ ನಿರ್ದೇಶಕ ಸುರೇಶ್ಚಂದ್ರ ಕೃಷ್ಣ ಹೆಗಡೆ ಕೆಶಿನ್ಮನೆ ರೂ. 10,000/- ಚೆಕ್ ಹಾಗೂ ಕೆ.ಡಿ.ಸಿ.ಸಿ. ಬ್ಯಾಂಕ್ ಲಿ., ಶಿರಸಿ ವತಿಯಿಂದ ರೂ. 5,000/- ಚೆಕ್’ನ್ನು ವಿತರಿಸಿದರು.

    ಈ ಸಂದರ್ಭದಲ್ಲಿ ಮಾತನಾಡಿದ ಅವರು ಕಲ್ಯಾಣ ಸಂಘದಿಂದ ಅನೇಕ ಕಲ್ಯಾಣ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಅದರಲ್ಲಿ ಮೊದಲನೇಯದಾಗಿ ಹಾಲು ಉತ್ಪಾದಕರ ಮತ್ತು ನೌಕರರ ಮಕ್ಕಳಿಗಾಗಿ ವಿದ್ಯಾರ್ಥಿ ನಿಲಯವನ್ನು ಒಕ್ಕೂಟದ ಜಾಗದಲ್ಲಿ ನಿರ್ಮಾಣ ಮಾಡಲು ಈಗಾಗಲೇ ತೀರ್ಮಾನಿಸಲಾಗಿದ್ದು, ಹಾಗೂ ಹಾಲು ಉತ್ಪಾದಕರು ಮತ್ತು ನೌಕರರ ಮಕ್ಕಳ ಕಲ್ಯಾಣ ಕಾರ್ಯಕ್ಕಾಗಿ ಕಲ್ಯಾಣ ಮಂಟಪವನ್ನು ಕೂಡ ಒಕ್ಕೂಟದ ಜಾಗದಲ್ಲಿ ನಿರ್ಮಾಣ ಮಾಡಲು ತೀರ್ಮಾನಿಸಲಾಗಿದೆ ಎಂದರು. ಜಿಲ್ಲೆಯಲ್ಲಿ ನಂದಿನಿ ಹಾಲಿನ ಬೇಡಿಕೆ ದಿನದಿಂದ ದಿನ ಗಣನೀಯವಾಗಿ ಹೆಚ್ಚಾಗುತ್ತಿದೆ, ಹೈನುಗಾರಿಕೆ ಎಂಬ ವ್ಯವಸ್ಥೆಯನ್ನು ಇನ್ನೂ ಸದೃಢ ಪಡಿಸುವ ಅನಿವಾರ್ಯತೆ ಇರುವ ಕಾರಣ ಜಿಲ್ಲೆಯ ಎಲ್ಲಾ ಹಾಲು ಉತ್ಪಾದಕ ರೈತರುಗಳು ಈ ವಿಷಯವನ್ನು ವಿಶೇಷವಾಗಿ ಪರಿಗಣಿಸಿ ಇನ್ನೂ ಅತೀ ಹೆಚ್ಚಿನ ಹಾಲು ಉತ್ಪಾದನೆಯ ದೃಷ್ಠಿಯಿಂದ ಮನೆಗೊಂದು ಹಸುವನ್ನು ಕಟ್ಟಿ ಹೈನುಗಾರಿಕೆಯಲ್ಲಿ ಸಕ್ರೀಯವಾಗಿ ತಮ್ಮನ್ನು ತಾವು ತೊಡಗಿಸಿಕೊಂಡು ಹೈನುಗಾರಿಕೆಯ ವ್ಯವಸ್ಥೆಗೆ ಇನ್ನೂ ಹೆಚ್ಚಿನ ಬಲ ನೀಡಬೇಕು ಎಂದು ಕರೆ ನೀಡಿದರು.
    ಈ ಸಂದರ್ಭದಲ್ಲಿ ಜಾನ್ಮನೆ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಶ್ರೀಕಾಂತ ಹೆಗಡೆ ಅವರು ಸಂಘದ ವತಿಯಿಂದ ಸುರೇಶ್ಚಂದ್ರ ಕೃಷ್ಣ ಹೆಗಡೆ ಅವರಿಗೆ ಶಾಲು ಹೊದಿಸಿ ಫಲ ತಾಂಬೂಲವನ್ನು ನೀಡಿ ಗೌರವಿಸಿದರು. ಮುಖ್ಯಕಾರ್ಯನಿರ್ವಾಹಕರಾದ ರಾಮಕೃಷ್ಣ ಹೆಗಡೆ, ಸಂಘದ ಆಡಳಿತ ಮಂಡಳಿಯ ಸದಸ್ಯರು, ಹಾಲು ಉತ್ಪಾದಕರು ಹಾಗೂ ಧಾರವಾಡ ಸಹಕಾರ ಹಾಲು ಒಕ್ಕೂಟದ ವಿಸ್ತರಣಾ ಸಮಾಲೋಚಕರಾದ ಜಯಂತ ಪಟಗಾರ ಉಪಸ್ಥಿತರಿದ್ದರು.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top