ಕಾರವಾರ: ಜಿಲ್ಲೆಯ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಉಪ ವಿಭಾಗವು ಪ್ರತಿ ಶನಿವಾರ, ಭಾನುವಾರ ಮತ್ತು ಸಾರ್ವತ್ರಿಕ ರಜಾ ದಿನಗಳಂದು ಗೋಕರ್ಣ, ಕುಮಟಾ, ಹೊನ್ನವಾರ ಸುತ್ತಮುತ್ತಲಿನ ಏಳು ಪ್ರೇಕ್ಷಣೀಯ ಸ್ಥಳಗಳನ್ನು ಸಂದರ್ಶಿಸುವ ಒಂದು ದಿನದ ವಿಶೇಷ ಪ್ಯಾಕೇಜ್ ಟೂರ್‌ಗೆ ಅವಕಾಶ ನೀಡುತ್ತಿದೆ.
ಆಸಕ್ತರು KSRTC AWATAR APP ಮೂಲಕ ಮುಂಗಡ ರಿಸರ್ವೇಶನ್ ಮಾಡಿಕೊಂಡು ಸಾರ್ವಜನಿಕರು ಈ ವ್ಯವಸ್ಥೆಯ ಪ್ರಯೋಜನವನ್ನು ಪಡೆದುಕೊಳ್ಳಬೇಕು ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಉಪವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
NWKRTCಯಿಂದ ವಿಶೇಷ ಪ್ಯಾಕೇಜ್ ಟೂರ್
