ಹೊನ್ನಾವರ: ಪಟ್ಟಣದಲ್ಲಿ ಜಿಲ್ಲಾ ನಾಮಧಾರಿ ಅಭಿವೃದ್ಧಿ ಸಂಘದ ವತಿಯಿಂದ ನಿರ್ಮಾಣಗೊಂಡ ವಿದ್ಯಾರ್ಥಿನಿಲಯ ಹಾಗೂ ಸಭಾಭವನದ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ ನ.5ರಂದು ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಹಾಗೂ ಮಾಜಿ ಸಚಿವ ಆರ್.ಎನ್.ನಾಯ್ಕ ತಿಳಿಸಿದರು.
ಪಟ್ಟಣದ ನಾಮಧಾರಿ ಅಭಿವೃದ್ಧಿ ಸಂಘದ ಕಾರ್ಯಾಲಯದಲ್ಲಿ ಶುಕ್ರವಾರದಂದು ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿ, ಪತ್ರಿಕಾಗೋಷ್ಠಿಯಲ್ಲಿ ಕಾರ್ಯಕ್ರಮದ ಮಾಹಿತಿ ನೀಡಿದ ಅವರು, ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ, ಶ್ರೀರಾಮಕ್ಷೇತ್ರ ಮಹಾಸಂಸ್ಥಾನದ ಶ್ರೀಬ್ರಹ್ಮಾನಂದ ಸರಸ್ವತೀ ಸ್ವಾಮೀಜಿ, ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಶಾಸಕ ದಿನಕರ ಶೆಟ್ಟಿ, ಶಾಸಕ ಸುನೀಲ ನಾಯ್ಕ, ಮಾಜಿ ಸಚಿವ ಶಿವಾನಂದ ನಾಯ್ಕ, ಮಾಜಿ ಶಾಸಕರಾದ ಜೆ.ಡಿ.ನಾಯ್ಕ, ಮಂಕಾಳ ವೈದ್ಯ, ಶಾರದಾ ಶೆಟ್ಟಿ, ಮುಖ್ಯಮಂತ್ರಿಗಳ ಜಂಟಿ ಕಾರ್ಯದರ್ಶಿ ಜಗದೀಶ ಜಿ., ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಮತ್ತಿತರರು ಸಮಾರಂಭದಲ್ಲಿ ಪಾಲ್ಗೊಳ್ಳುವರು ಎಂದರು.
ಈ ಸ್ಥಳವನ್ನು 1926ರಲ್ಲಿ ಬ್ರಿಟೀಷ್ ಸರಕಾರವಿರುವಾಗ ನಾಮಧಾರಿ ಸಮಾಜದ ವಿದ್ಯಾರ್ಥಿನಿಲಯಕ್ಕೆ ನೀಡಲಾಗಿತ್ತು. 1965ರಲ್ಲೇ ಇಲ್ಲಿ ಸುಸಜ್ಜಿತ ವಿದ್ಯಾರ್ಥಿ ನಿಲಯ ಕಟ್ಟಲಾಗಿತ್ತು. ಪ್ರಸ್ತುತ ಹೊಸ ಕಟ್ಟಡವು 5 ಕೋಟಿ ರೂ. ವೆಚ್ಚದಲ್ಲಿ ವಿದ್ಯಾರ್ಥಿನಿಲಯವೂ ಸೇರಿದಂತೆ ವಿವಿಧ ರಚನಾತ್ಮಕ ಉದ್ದೇಶಗಳೊಂದಿಗೆ ಭವ್ಯ ಕಟ್ಟಡವನ್ನು ನಿರ್ಮಿಸಲಾಗಿದೆ ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಸಂಘದ ಕಾರ್ಯದರ್ಶಿ ಎನ್.ಕೆ.ನಾಯ್ಕ, ಜಿ.ಪಂ. ಮಾಜಿ ಸದಸ್ಯ ದೀಪಕ ನಾಯ್ಕ, ಜಿ.ಪಂ. ಮಾಜಿ ಸದಸ್ಯೆ ಪುಷ್ಪಾ ನಾಯ್ಕ, ವಕೀಲ ಎಲ್.ಆರ್.ನಾಯ್ಕ, ನಾಮಧಾರಿ ಅಭಿವೃದ್ಧಿ ಸಂಘದ ಎನ್.ಕೆ.ನಾಯ್ಕ, ಅನಂತ ನಾಯ್ಕ ಹೆಗ್ಗಾರ, ಆರ್.ಪಿ.ನಾಯ್ಕ, ಹರಿಯಪ್ಪ ನಾಯ್ಕ, ಎಂ.ಜಿ.ನಾಯ್ಕ, ವಿ.ಜಿ.ನಾಯ್ಕ, ರಾಮಪ್ಪ ನಾಯ್ಕ, ಐ.ವಿ.ನಾಯ್ಕ, ಗಜಾನನ ನಾಯ್ಕ ಮತ್ತಿತರರು ಇದ್ದರು.