• Slide
    Slide
    Slide
    previous arrow
    next arrow
  • ಭಾರತ್ ಜೋಡೋ ಯಾತ್ರೆಯಲ್ಲಿ ಹೆಜ್ಜೆ ಹಾಕಿದ ಮಂಜುನಾಥ ನಾಯ್ಕ

    300x250 AD

    ಕುಮಟಾ: ಕನ್ಯಾಕುಮಾರಿಯಿಂದ ಆರಂಭಗೊಂಡಿರುವ ಭಾರತ ಜೋಡೋ ಯಾತ್ರೆಯು ಕರ್ನಾಟಕದಲ್ಲಿ ನಡೆಯುತ್ತಿದ್ದು, ಈ ವೇಳೆ ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ ಅವರ ಜೊತೆ ಕುಮಟಾ- ಹೊನ್ನಾವರ ಕ್ಷೇತ್ರದ ಕಾಂಗ್ರೆಸ್ ಮುಖಂಡ ಮಂಜುನಾಥ ಎಲ್.ನಾಯ್ಕ ಅವರು ಕೂಡ ಯಾತ್ರೆಯಲ್ಲಿ ಹೆಜ್ಜೆ ಹಾಕಿದರು.
    ಈ ವೇಳೆ ಮುಂದಿನ ದಿನದಲ್ಲಿ ಕ್ಷೇತ್ರದಲ್ಲಿ ಇನ್ನಷ್ಟು ಬಲಿಷ್ಠವಾಗಿ ಪಕ್ಷ ಸಂಘಟನೆ ಮಾಡುವ ಬಗ್ಗೆ ಚರ್ಚೆ ನಡೆಸಲಾಯಿತು. ಕುಮಟಾ- ಹೊನ್ನಾವರ ಕ್ಷೇತ್ರದಲ್ಲಿ ಮಂಜುನಾಥ ನಾಯ್ಕ ಅವರು ಎಲ್ಲರನ್ನೂ ಒಟ್ಟಾಗಿ ಪಕ್ಷ ಸಂಘಟನೆ ಮಾಡುತ್ತಿರುವ ಬಗ್ಗೆ ಬಿ.ಕೆ.ಹರಿಪ್ರಸಾದ ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ಕುಮಟಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷವನ್ನ ಸಂಘಟನೆ ಮಾಡುತ್ತಿರುವ ಮಂಜುನಾಥ ನಾಯ್ಕ ಅವರಿಗೆ ಭಾರತ ಜೋಡೋ ಯಾತ್ರೆ ಮತ್ತಷ್ಟು ಹುರುಪು ತುಂಬಿದೆ ಎನ್ನುವುದು ಸತ್ಯ. ಇದರಿಂದಾಗಿ ಮುಂದಿನ ದಿನದಲ್ಲಿ ಕ್ಷೇತ್ರದಲ್ಲಿ ಪಕ್ಷವನ್ನ ಇನ್ನೂ ದೊಡ್ಡ ಮಟ್ಟದಲ್ಲಿ ಸಂಘಟನೆ ಮಾಡುವುದಾಗಿ ಮಂಜುನಾಥ ನಾಯ್ಕ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
    ಮಂಜುನಾಥ ನಾಯ್ಕ ಅವರ ನೇತೃತ್ವದಲ್ಲಿ ನೂರಾರು ಯುವಕರು ಯಾತ್ರೆಯಲ್ಲಿ ಪಾಲ್ಗೊಂಡಿದ್ದು, ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಂಡ ಎಲ್ಲರಿಗೂ ಟೀ ಶರ್ಟ್, ಕ್ಯಾಪ್ ವ್ಯವಸ್ಥೆ ಜೊತೆಗೆ ಕಾರ್ಯಕ್ರಮಕ್ಕೆ ತೆರಳಲು ಎಲ್ಲರೂ ವಾಹನದ ವ್ಯವಸ್ಥೆ ಕೂಡ ಕಲ್ಪಿಸಿದ್ದರು. ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ ಮಂಜುನಾಥ್ ನಾಯ್ಕ ಅವರು ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ಪ್ರಿಯಾಂಕ ಖರ್ಗೆ, ಸಲೀಂ ಅಹಮದ್, ಕಾಂಗ್ರೆಸ್ ಪಕ್ಷದ ಅನೇಕ ಹಿರಿಯ ಮುಖಂಡರನ್ನು ಭೇಟಿಯಾದರು.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top