• Slide
    Slide
    Slide
    previous arrow
    next arrow
  • ಕರ್ನಾಟಕದಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ: ಅರುಣ್ ಸಿಂಗ್ ವಿಶ್ವಾಸ

    300x250 AD

    ಬೆಂಗಳೂರು: ದೇಶದೆಲ್ಲೆಡೆ ಪ್ರಧಾನಿ ನರೇಂದ್ರ ಮೋದಿಜಿ ಅವರ ಪರವಾದ ಅಲೆ ಇದೆ. ಪಂಚ ರಾಜ್ಯ ಚುನಾವಣೆಯಲ್ಲಿ ಇದು ಸಾಬೀತಾಗಿದೆ. ಅದೇರೀತಿ ರಾಜ್ಯದಲ್ಲೂ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಏರಲಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕದ ಉಸ್ತುವಾರಿ ಅರುಣ್ ಸಿಂಗ್ ಅವರು ವಿಶ್ವಾಸ ವ್ಯಕ್ತಪಡಿಸಿದರು.

    ಹಾವೇರಿ ಜಿಲ್ಲೆಯ ಮಾಸೂರಿನಲ್ಲಿ ಇಂದು ಕಾರ್ಯಕರ್ತರ ಸಂಕಲ್ಪ ಸಭೆಯಲ್ಲಿ ಅವರು ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರಕಾರಗಳ ಜನಪರ ಕಾರ್ಯಗಳಿಂದಾಗಿ ಬಿಜೆಪಿ ಮತ್ತೆ 150ಕ್ಕೂ ಹೆಚ್ಚು ಸ್ಥಾನ ಗಳಿಸಿ ಅಧಿಕಾರ ಪಡೆಯಲಿದೆ. ಪಂಚ ರಾಜ್ಯ ಚುನಾವಣೆಯಲ್ಲಿ ಗೋವಾ, ಮಣಿಪುರ, ಉತ್ತರಾಖಂಡ, ಉತ್ತರಪ್ರದೇಶಗಳಲ್ಲಿ ಬಿಜೆಪಿ ಅಧಿಕಾರ ಗಳಿಸಿದೆ. ಕರ್ನಾಟಕದಲ್ಲೂ ಅದೇ ಮಾದರಿಯಲ್ಲಿ ಜನರು ಬಿಜೆಪಿಗೆ ಮತ ಕೊಟ್ಟು ಗೆಲ್ಲಿಸಲಿದ್ದಾರೆ ಎಂದರು.

    ಬಡವರು, ರೈತರು, ಮಹಿಳೆಯರು ಬಿಜೆಪಿ ಮತ್ತು ಮೋದಿಜಿ ಅವರ ಪರವಾಗಿದ್ದಾರೆ. ಜನಧನ್, ಕಿಸಾನ್ ಸಮ್ಮಾನ್ ಪರಿಣಾಮವಾಗಿ ರೈತರು ಮತ್ತು ಮಹಿಳೆಯರು ಬಿಜೆಪಿ ಪರವಿದ್ದಾರೆ. ಮನೆಮನೆಗೆ ನಳ್ಳಿ ನೀರು ಅಭಿಯಾನ ಯಶಸ್ವಿಯಾಗಿದೆ ಎಂದು ವಿವರಿಸಿದರು. ಉಜ್ವಲ ಯೋಜನೆ, ಶೌಚಾಲಯ ನಿರ್ಮಾಣದಂಥ ಪ್ರಮುಖ ಯೋಜನೆಗಳು ಜಾರಿಯಾಗಿವೆ ಎಂದರು.

    ಕಾಂಗ್ರೆಸ್ ಅಲ್ಪಸಂಖ್ಯಾತರ ಪರವಾಗಿತ್ತು. ಆದರೆ, ಮೋದಿಜಿ ಸರಕಾರವು ರೈತರು ಮತ್ತು ಬಡವರ ಪರವಾಗಿದೆ. ಈ ಜಿಲ್ಲೆ ಮಾತ್ರವಲ್ಲದೆ ಕರ್ನಾಟಕದ ಸರ್ವತೋಮುಖ ಅಭಿವೃದ್ಧಿ ಕಾರ್ಯ ನಿರಂತರವಾಗಿ ನಡೆದಿದೆ ಎಂದು ಮೆಚ್ಚುಗೆ ಸೂಚಿಸಿದರು.

    300x250 AD

    ಕಾಂಗ್ರೆಸ್ 2 ರಾಜ್ಯಗಳಲ್ಲಿ ಮಾತ್ರ ಅಧಿಕಾರ ಉಳಿಸಿಕೊಂಡಿದೆ. ಮುಂದೆ ಅಲ್ಲಿಯೂ ಅದು ಅಧಿಕಾರ ಕಳಕೊಳ್ಳಲಿದೆ. ಭಾರತ್ ಜೋಡೋ ಯಾತ್ರೆ ನಡುವೆ ಅನೇಕ ಕಾಂಗ್ರೆಸ್ಸಿಗರು ಆ ಪಕ್ಷ ತೊರೆಯುತ್ತಿದ್ದಾರೆ ಎಂದು ವಿವರಿಸಿದರು. ರಾಜ್ಯ ಮತ್ತು ಕೇಂದ್ರ ಬಿಜೆಪಿ ಸರಕಾರಗಳ ಜನಪರ ಕಾರ್ಯಗಳ ಕುರಿತು ಮಾಹಿತಿ ನೀಡಿ, ಬಿಜೆಪಿ ಪರವಾಗಿ ಜನರು ನಿಲ್ಲಲಿದ್ದಾರೆ ಎಂದು ವಿಶ್ವಾಸದಿಂದ ನುಡಿದರು. ಅತಿ ಹೆಚ್ಚು ಮತದೊಂದಿಗೆ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಿ ಎಂದು ಜನರಲ್ಲಿ ಮನವಿ ಮಾಡಲಾಯಿತು.

    ಕೃಪೆ: http://news13.in

    Share This
    300x250 AD
    300x250 AD
    300x250 AD
    Leaderboard Ad
    Back to top