ಬೆಂಗಳೂರು : ಕೆಪಿಎಸ್ಸಿ (KPSC) ಜಲಸಂಪನ್ಮೂಲ ಇಲಾಖೆಯ 169 ಕಿರಿಯ ಎಂಜಿನಿಯರ್ ಗಳು ಹಾಗೂ ಆರ್ಥಿಕ ಮತ್ತು ಸಾಂಖ್ಯಿಕ ಇಲಾಖೆಯ 105 ನಿರೀಕ್ಷಕರು ಮತ್ತು 58 ಸಹಾಯಕ ಸಾಂಖ್ಯಿಕ ಅಧಿಕಾರಿ ಸೇರಿ ಒಟ್ಟು 332 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆಜಲಸಂಪನ್ಮೂಲ ಇಲಾಖೆಯ ಒಟ್ಟು 166 (ಸಿವಿಲ್) ಹಾಗೂ 03 (ಮೆಕ್ಯಾನಿಕಲ್) ಕಿರಿಯ ಎಂಜಿನಿಯರ್ಗಳ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆರ್ಥಿಕ ಮತ್ತು ಸಾಂಖ್ಯಿಕ ಇಲಾಖೆಯ 105 ನಿರೀಕ್ಷಕರ ಹುದ್ದೆಗಳನ್ನು ಮತ್ತು 58 ಸಹಾಯಕ ಸಾಂಖ್ಯಿಕ ಅಧಿಕಾರಿಗಳ ಹುದ್ದೆಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಭರ್ತಿ ಮಾಡಲಾಗುವುದು ಎಂದು ಆಯೋಗ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಕೆಪಿಎಸ್ಸಿಯ ಒಟ್ಟು 332 ಹುದ್ದೆಗಳ ಭರ್ತಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಅಕ್ಟೋಬರ್ 19 ರಿಂದ ಆರಂಭವಾಗಲಿದ್ದು, ನವೆಂಬರ್ 17 ಕೊನೆಯ ದಿನವಾಗಿದೆ. ಆನ್ಲೈನ್ ಮೂಲಕ ಅರ್ಜಿ ಹಾಗೂ ಶುಲ್ಕ ಪಾವತಿ ಮಾಡಬೇಕಾಗಿದೆ. ಹೆಚ್ಚಿನ ಮಾಹಿತಿಗಾಗಿ ಆಯೋಗದ ವೆಬ್ ಸೈಟ್ http://www.kpsc.comಗೆ ಭೇಟಿ ನೀಡಬಹುದು.