ದಾಂಡೇಲಿ: ಪ್ರೀತಿಯ ನಾಟಕವಾಡಿ ಅತ್ಯಾಚಾರ ನಡೆಸಿದ್ದಲ್ಲದೆ, ಖಾಸಗಿ ಸಮಯದ ಫೊಟೊಗಳನ್ನಿಟ್ಟುಕೊಂಡು ಹಣಕ್ಕಾಗಿ ಪೀಡಿಸುತ್ತಿದ್ದಾನೆಂದು ಆರೋಪಿಸಿ ಯುವಕನೋರ್ವನ ವಿರುದ್ಧ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಸಾಮಾಜಿಕ ಜಾಲತಾಣದ ಮೂಲಕ ಪರಿಚಯವಾಗಿ, ಪರಿಚಯ ಪ್ರೀತಿಗೆ ತಿರುಗಿ, ಮದುವೆಯಾಗುವುದಾಗಿ ನಂಬಿಸಿ ಯುವತಿಯೊಬ್ಬಳ ಜೊತೆ ಸಂಬಂಧ ಬೆಳೆಸಿ, ವಿಡಿಯೋ ಕರೆ ಮಾಡಿ ಮಾತನಾಡಿ ಆಕೆಯನ್ನು ಅಶ್ಲೀಲವಾಗಿರುವಂತೆ ಹೇಳಿ, ಅಶ್ಲೀಲ ಪೊಟೋಗಳನ್ನು ಕ್ಲಿಕ್ಕಿಸಿಕೊಂಡು, ಆನಂತರ ಅದೇ ಪೊಟೋಗಳನ್ನಿಟ್ಟಿಕೊಂಡು ಹಣಕ್ಕಾಗಿ ಪೀಡಿಸುವುದರ ಜೊತೆಗೆ ಬಲವಂತದ ಅತ್ಯಾಚಾರ ನಡೆಸಿದ್ದಾನೆ ಎಂದು ಯುವತಿ ಯುವಕನೊಬ್ಬನ ವಿರುದ್ಧ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾಳೆ.