Slide
Slide
Slide
previous arrow
next arrow

ಅಂಬೇಡ್ಕರರಿಂದ ದೇಶದ ಜನರಿಗೆ ವಜ್ರಕವಚ: ಅನ್ಸಾರ್ ಶೇಖ್

300x250 AD

ಕುಮಟಾ: ಅಂಬೇಡ್ಕರ್ ಅವರು ಸಂವಿಧಾನದ ಮೂಲಕ ದೇಶದ ಜನರಿಗೆ ವಜ್ರಕವಚ ಒದಗಿಸಿದ್ದಾರೆ ಎಂದು ಹಿರಿಯ ಪತ್ರಕರ್ತರಾದ ಅನ್ಸಾರ್ ಶೇಖ್ ಅಭಿಪ್ರಾಯಪಟ್ಟರು.

ಅವರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕುಮಟಾದಲ್ಲಿ ಕನ್ನಡ ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಜರುಗಿದ ‘ಅಂಬೇಡ್ಕರ್ ಓದು’ ಕಾರ್ಯಕ್ರಮ ವನ್ನು ಉದ್ಘಾಟಿಸಿ ಮಾತನಾಡಿದರು. ಅಂಬೇಡ್ಕರ್ ನೊಂದವರ ಹಾಗೂ ತುಳಿತಕ್ಕೆ ಒಳಗಾದ ಜನಾಂಗಕ್ಕೆ ಸಮಾನತೆ ನೀಡಲು ಹೋರಾಟ ಮಾಡಿದ ಮಹಾ ಮಾನವತಾವಾದಿ ಎಂದು ವಿವರಿಸಿದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಡಾ.ಎಂ.ಆರ್.ನಾಯಕ ಮಾತನಾಡಿ, ಯುವಕರು ಪ್ರಜ್ಞಾವಂತರಾಗಬೇಕು. ಪ್ರಶ್ನಿಸುವ ಮನೋಭಾವ ಬೆಳೆಸಿಕೊಳ್ಳಬೇಕು. ಸಂವಿಧಾನದ ಆಶಯವನ್ನು ಅರ್ಥೈಸಿಕೊಂಡು ದೇಶವನ್ನು ಮುನ್ನಡೆಸಬೇಕು ಎಂದು ಕರೆ ನೀಡಿದರು.

300x250 AD

ವಿಶೇಷ ಉಪನ್ಯಾಸ ನೀಡಿದ ಪ್ರೊ.ವಿದ್ಯಾ ತಲಗೇರಿ ಅಂಬೇಡ್ಕರ್ ಅವರ ಬದುಕು ಮತ್ತು ಬರಹದ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು. ಕನ್ನಡ ಸಂಸ್ಕೃತಿ ಇಲಾಖೆಯ ನಿರ್ದೇಶಕರಾದ ನರೇಂದ್ರ ನಾಯಕ ಕಾರ್ಯಕ್ರಮದ ಉದ್ದೇಶವನ್ನು ವಿವರಿಸಿದರು.

ಕಾಲೇಜಿನ ಪ್ರಾಂಶುಪಾಲರಾದ ವಿಜಯಾ ಡಿ.ನಾಯ್ಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶಿಲ್ಪ ಬಿ.ಎಂ. ಸ್ವಾಗತಿಸಿದರು. ಸಾಂಸ್ಕೃತಿಕ ವಿಭಾಗದ ಸಂಚಾಲಕರಾದ ಪ್ರೊ.ಮೂರ್ತಿ ಐ.ಆರ್. ಕಾರ್ಯಕ್ರಮ ನಿರ್ವಹಿಸಿದರು. ಸಮಾಜಶಾಸ್ತ್ರ ಉಪನ್ಯಾಸಕರಾದ ಪ್ರೊ.ನಾಗರಾಜ ಬಿ. ವಂದಿಸಿದರು.ಅಂಬೇಡ್ಕರ್ ಬರಹಗಳ ಕುರಿತಾಗಿ ನಡೆದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಸಂವಿಧಾನ ಮತ್ತು ಅಂಬೇಡ್ಕರ್ ಭಾಷಣಗಳ ಪುಸ್ತಕ ವನ್ನು ಬಹುಮಾನದ ರೂಪದಲ್ಲಿ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಕಾಲೇಜಿನ ಎಲ್ಲ ಬೋಧಕ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

Share This
300x250 AD
300x250 AD
300x250 AD
Back to top