• Slide
    Slide
    Slide
    previous arrow
    next arrow
  • ಅಂಚೆ ಇಲಾಖೆಯಿಂದ ಅಪಘಾತ ವಿಮೆ: 399 ರೂ.ಕಟ್ಟಿದರೆ ಭಾರೀ ವಿಮೆ ಲಭ್ಯ

    300x250 AD

    ನವದೆಹಲಿ: ಜನಸಾಮಾನ್ಯರಿಗೆ ನೆರವಾಗಲೆಂದು ಭಾರತೀಯ ಅಂಚೆ ಇಲಾಖೆಯು ಅತ್ಯಂತ ಕಡಿಮೆ ಹಣದಲ್ಲಿ ಭಾರಿ ಮೊತ್ತದ ಅಪಘಾತ ವಿಮೆಯನ್ನು ಪರಿಚಯಿಸಿದೆ.
    ಆಕಸ್ಮಿಕ ಅವಘಡಗಳಿಗೆ ತುತ್ತಾದಾಗ ಅಂಚೆ ಕಚೇರಿಯ ಈ ಅಲ್ಪ ಮೊತ್ತದ ಅಪಘಾತ ವಿಮೆ ಆರ್ಥಿಕವಾಗಿ ಸಹಾಯಕ್ಕೆ ಬರಲಿದೆ. ಕನಿಷ್ಠ 18ರಿಂದ ಗರಿಷ್ಠ 65ವರ್ಷದ ಒಳಗಿನವರು ಕೂಡಲೇ ಖಾತೆ ತೆರೆದು ಈ ವಿಮೆಯ ಅನುಕೂಲ ಪಡೆಯಬಹುದಾಗಿದೆ.

    ಹತ್ತಾರು ಆಕಸ್ಮಿಕ ಅಪಘಾತಗಳಿಗೆ ಪರಿಹಾರ ಪಡೆಯಲು ಕೂಡಲೇ ಈ ವಿಮೆಯ ಪ್ರಯೋಜನ ಪಡೆಯಬಹುದಾಗಿದೆ. ನಿಮ್ಮ ಹತ್ತಿರದ ಅಂಚೆ ಕಚೇರಿಗೆ ತೆರಳಿ ವಾರ್ಷಿಕವಾಗಿ 399 ರೂ. ಹಣ ಕಟ್ಟಿದರೆ ಈ 10ಲಕ್ಷ ರೂ. ಅಪಘಾತ ವಿಮೆಗೆ ಅರ್ಹರಾಗುತ್ತೀರಿ. ಈ ವಿಮೆಯ ಫಲಾನುಭವಿಗಳು ಆಕಸ್ಮಿಕವಾಗಿ ಅಪಘಾತಕ್ಕೆ ತುತ್ತಾದ ಅಥವಾ ಅಂಚೆ ಇಲಾಖೆ ಸೂಚಿಸಿರುವ ಇನ್ನಿತರ ಅವಘಡದ ಸನ್ನಿವೇಶಗಳಿಗೆ ಒಳಗಾದರೆ ಅವರು ವಿವಿಧ ರೂಪದಲ್ಲಿ ಆರ್ಥಿಕ ಸಹಾಯ ಪಡೆಯಬಹುದು.
    ಈಗಾಗಲೇ ನೀವು ಅಂಚೆ ಇಲಾಖೆಯಲ್ಲಿ ‘ಇಂಡಿಯಾ ಪೋಸ್ಟ್ ಪೇಮೆಂಟ್ ಅಕೌಂಟ್’ ಖಾತೆ ಹೊಂದಿದ್ದರೆ ನೀವು ಈ ಅಪಘಾತ ವಿಮೆ ಮಾಡಿಸಲು ಅರ್ಹರಾಗುತ್ತೀರಿ. ಒಂದು ವೇಳೆ ಈ ಖಾತೆ ಹೊಂದಿರದಿದ್ದರೆ ಕೂಡಲೇ 100ರೂ. ಕಟ್ಟಿ ಹತ್ತಿರದ ಅಂಚೆ ಕಚೇರಿಯಲ್ಲಿ ಒಂದೇ ದಿನದಲ್ಲಿ ‘ಇಂಡಿಯಾ ಪೋಸ್ಟ್ ಪೇಮೆಂಟ್ ಆಕೌಂಟ್ ಖಾತೆ ತೆರೆಯಬಹುದು.

    ವಿಮಾ ಯೋಜನೆ ಫಲಾನುಭವಿಯು ಆಕಸ್ಮಿಕ ಸಾವನ್ನಪ್ಪಿದರೆ ಅವರು ಕುಟುಂಬಸ್ಥರಿಗೆ ಹತ್ತು ಲಕ್ಷ ರೂ. ನೀಡಲಾಗುತ್ತದೆ. ಅಂದರೆ ಬಸ್, ಕಾರು ಇನ್ನಿತರ ಅಪಘಾತಗಳು, ಹಾವು ಕಡಿತ, ವಿದ್ಯುತ್ ಆಘಾತ, ಮಹಡಿಯಿಂದ ಆಕಸ್ಮಿಕವಾಗಿ ಬಿದ್ದು ಸಾವು ಸೇರಿದಂತೆ ವಿವಿಧ ಆಕಸ್ಮಿಕವಾಗಿ ಸಾವು ಸಂಭವಿಸಿದರೆ ಪರಿಹಾರ ಪಡೆಯಬಹುದು, ಇದರ ಪೂರ್ತಿ ಮಾಹಿತಿ ಈ ಕೆಳಗಿನಂತಿದೆ.

    ಅಪಘಾತದಿಂದ ಮರಣ ಹೊಂದಿದಲ್ಲಿ 10ಲಕ್ಷ ರೂ. ಆರ್ಥಿಕ ಸಹಾಯ.

    ಶಾಶ್ವತವಾಗಿ ಅಂಗವೈಕಲ್ಯವಾದರೆ 10ಲಕ್ಷ ರೂ. ಆರ್ಥಿಕ ಸಹಾಯ.
    ಆಸ್ಪತ್ರೆ ವೆಚ್ಚಕ್ಕಾಗಿ 60,000 ರೂ. ಹಣಕ್ಕೆ ಅರ್ಹ.

    300x250 AD

    ಮೃತರ ಮಕ್ಕಳ ಶಿಕ್ಷಣಕ್ಕಾಗಿ ಪ್ರತಿ ಮಗುವಿಗೆ ರೂ.1 ಲಕ್ಷ ವರೆಗೆ ಸಹಾಯ ಸಂಪೂರ್ಣ ಶಿಕ್ಷಣಕ್ಕೆ ಗರಿಷ್ಠ 2ಲಕ್ಷ ರೂ

    1 ಓಪಿಡಿ ವೆಚ್ಚಕ್ಕೆಂದು 30,000 ಸಾವಿರ ರೂ.ಹಣ ಅಪಘಾತದಲ್ಲಿ ಪಾರ್ಶ್ವವಾಯು ಉಂಟಾದರೆ 10ಲಕ್ಷ ರೂ. ನೀಡಿಕೆ

    ಕುಟುಂಬದ ಆಸ್ಪತ್ರೆ ಪ್ರಯಾಣ ವೆಚ್ಚಕ್ಕೆ 25,000 ರೂ. ಸಹಾಯ.

    ಆಸಕ್ತರು ಇಂಡಿಯಾ ಪೋಸ್ಟ್ ಪೇಮೆಂಟ್ ಅಕೌಂಟ್ ಖಾತೆ ತೆರೆಯಲು, ಈ ವಿಮಾ ಯೋಜನೆಯ ಲಾಭ ಪಡೆದುಕೊಳ್ಳಲು ನಿಮ್ಮ ಹತ್ತಿರದ ಅಂಚೆ ಕಚೇರಿಗೆ ಭೇಟಿ ನೀಡಬಹುದು.

    Share This
    300x250 AD
    300x250 AD
    300x250 AD
    Leaderboard Ad
    Back to top