• Slide
    Slide
    Slide
    previous arrow
    next arrow
  • ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಅಭಿಷೇಕ ಕಳಸ

    300x250 AD

    ಕಾರವಾರ: ನಗರದ ಕಳಸವಾಡದ ನಿವಾಸಿ ಅಭಿಷೇಕ ಕಳಸ ಇತ್ತೀಚಿಗೆ ಧಾರವಾಡದಲ್ಲಿ ನಡೆದ ಧಾರವಾಡ ಜಿಲ್ಲಾ ಮಟ್ಟದ ಯುವ ಉತ್ಸವದ ಯುವ ಸಂವಾದ ಸ್ಪರ್ಧೆಯಲ್ಲಿ ಉತ್ತಮ ರೀತಿಯಲ್ಲಿ ವಿಷಯವನ್ನು ಮಂಡಿಸಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

    ಅಭಿಷೇಕ, ಧಾರವಾಡದಲ್ಲಿ ಎಂಎಸ್ಸಿ ಭೌತಶಾಸ್ತ್ರ ಸ್ನಾತಕೋತ್ತರ ಪದವಿ ಪೂರೈಸಿ ಉನ್ನತ ವ್ಯಾಸಂಗವನ್ನು ಮಾಡುತ್ತಿದ್ದಾರೆ. ಮೊದಲಿನಿಂದಲೂ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಅನೇಕ ಬಹುಮಾನಗಳನ್ನು ಪಡೆದಿದ್ದಾರೆ. ಬಾಲ್ಯದಿಂದಲೂ ವಾಕ್‌ಚಾತುರ್ಯವನ್ನ ಬೆಳೆಸಿಕೊಂಡು ಪ್ರಸ್ತುತ ನಗರದ ಉತ್ತಮ ವಾಗ್ಮಿ ಎಂದು ಗುರುತಿಸಿಕೊಂಡಿದ್ದಾರೆ. ಈ ಹಿಂದೆ ಮಂಡ್ಯದಲ್ಲಿ ನಡೆದ ರಾಜ್ಯಮಟ್ಟದ ಯುವಜನ ಉತ್ಸವದಲ್ಲಿ ಭಾಗವಹಿಸಿ ಪ್ರಥಮ ಸ್ಥಾನವನ್ನು ಪಡೆದು ರಾಷ್ಟç ಮಟ್ಟಕ್ಕೆ ಆಯ್ಕೆಯಾಗಿದ್ದರು. ಶಾಲಾ- ಕಾಲೇಜು ದಿನಗಳಲ್ಲಿ ಯುವ ಸಂವಾದ, ಯುವ ಸಂಸತ್ತು, ಭಾಷಣ ಸ್ಪರ್ಧೆ ಮುಂತಾದವುಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದರು.

    300x250 AD

    ಉತ್ತರ ಕನ್ನಡ ಜಿಲ್ಲೆಯ ಪ್ರತಿಭೆ ಬೇರೆ ಜಿಲ್ಲೆಯಲ್ಲಿ ನಡೆದ ಜಿಲ್ಲಾ ಯುವ ಉತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದು ಜಿಲ್ಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಬೆಂಗಳೂರಿನಲ್ಲಿ ನಡೆಯುವ ರಾಜ್ಯ ಮಟ್ಟದ ಯುವ ಉತ್ಸವದಲ್ಲಿ ಉತ್ತಮ ಪ್ರದರ್ಶನ ನೀಡಲಿ ಎಂದು ಅನೇಕರು ಶುಭ ಹಾರೈಸಿದ್ದಾರೆ.

    Share This
    300x250 AD
    300x250 AD
    300x250 AD
    Leaderboard Ad
    Back to top