ನವದೆಹಲಿ: ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಒಟ್ಟು 9,385 ಮತಗಳ ಪೈಕಿ 7,897 ಮತಗಳನ್ನು ಪಡೆಯುವ ಮೂಲಕ ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯಲ್ಲಿ ಭರ್ಜರಿ ಜಯಗಳಿಸಿದ್ದಾರೆ, ಆದರೆ ಅವರ ಎದುರಾಳಿ ಶಶಿ ತರೂರ್ ಕೇವಲ 1,072 ಮತಗಳನ್ನು ಗಳಿಸಿ ಸೋಲನ್ನು ಒಪ್ಪಿಕೊಂಡಿದ್ದಾರೆ.
2019 ರ ಲೋಕಸಭಾ ಚುನಾವಣೆಯ ನಂತರ ರಾಹುಲ್ ಗಾಂಧಿ ಅವರು ಅಧಿಕಾರದಿಂದ ಕೆಳಗಿಳಿದ ನಂತರ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಸ್ಥಾನವನ್ನು ಖರ್ಗೆ ಅವರು ಅಲಂಕರಿಸಲು ಸಿದ್ಧರಾಗಿದ್ದಾರೆ. ಇದರೊಂದಿಗೆ ಖರ್ಗೆ ಅವರು ಎರಡು ದಶಕಗಳಲ್ಲಿನ ಮೊದಲ ಗಾಂಧಿಯೇತರ ಕಾಂಗ್ರೆಸ್ ಅಧ್ಯಕ್ಷರಾಗಲಿದ್ದಾರೆ.
ಇದಕ್ಕೂ ಮೊದಲು ಕಾಂಗ್ರೆಸ್ ಅಧ್ಯಕ್ಷೀಯ ಅಭ್ಯರ್ಥಿ ಶಶಿ ತರೂರ್ ಅವರು ಕಾಂಗ್ರೆಸ್ ಕೇಂದ್ರ ಚುನಾವಣಾ ಪ್ರಾಧಿಕಾರದ ಅಧ್ಯಕ್ಷ ಮಧುಸೂಧನ್ ಮಿಸ್ತ್ರಿ ಅವರಿಗೆ ಪತ್ರ ಬರೆದು, “ಯುಪಿಯಲ್ಲಿ ಚುನಾವಣಾ ನಡವಳಿಕೆಯಲ್ಲಿ ಅತ್ಯಂತ ಗಂಭೀರ ಅಕ್ರಮಗಳು ನಡೆದಿವೆ. ಹೀಗಾಗಿ ಯುಪಿಯ ಎಲ್ಲಾ ಮತಗಳನ್ನು ಅಸಿಂಧು ಎಂದು ಪರಿಗಣಿಸಬೇಕು” ಎಂದು ಒತ್ತಾಯಿಸಿದ್ದರು.
ಪಕ್ಷದ ಹಿರಿಯ ನಾಯಕ ಖರ್ಗೆ ಅವರನ್ನು ಗಾಂಧಿ ಕುಟುಂಬದ ‘ಅನಧಿಕೃತ ಅಭ್ಯರ್ಥಿ’ ಎಂದು ಪರಿಗಣಿಸಲಾಗಿದೆ. ಹೀಗಾಗಿಯೇ, ಹೆಚ್ಚಿನ ಸಂಖ್ಯೆಯ ಹಿರಿಯ ನಾಯಕರು ಅವರನ್ನು ಬೆಂಬಲಿಸಿದ್ದಾರೆ ಎನ್ನಲಾಗಿದೆ.
ಕೃಪೆ:http://news13.in