Slide
Slide
Slide
previous arrow
next arrow

ಅ. 28ಕ್ಕೆ ಕೋಟಿಕಂಠ ಗಾಯನ ಕಾರ್ಯಕ್ರಮ: ಹೆಸರು ನೊಂದಾಯಿಸಲು ಮಾಹಿತಿ ಇಲ್ಲಿದೆ

300x250 AD

ಕಾರವಾರ: ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಜಿಲ್ಲೆಯಾದ್ಯಂತ ಕೋಟಿ ಕಂಠ ಗಾಯನ ಕಾರ್ಯಕ್ರಮವನ್ನು ಆಯೋಜಿಸಲು ಜಿಲ್ಲಾಡಳಿತ ತಯಾರಿಯನ್ನು ನಡೆಸಿದೆ.
ನಮ್ಮ ಪರಂಪರೆ ಮತ್ತು ನಾಡು ನುಡಿಯ ಬಗ್ಗೆ ಹೆಮ್ಮೆ ಮೂಡಿಸುವ ಕವಿತೆಗಳನ್ನ ಹಾಡಿಸಿ ಜನರಲ್ಲಿ ನಾಡಿನಬಗ್ಗೆ ಗೌರವ ಮೂಡಿಸುವ ಕಾರ್ಯಕ್ರಮ ಇದಾಗಿದ್ದು ಕಳೆದ ವರ್ಷ ಇದೇ ಉದ್ದೇಶದಿಂದ ರಾಜ್ಯೋತ್ಸವದಲ್ಲಿ ಪ್ರಾತಿನಿಧಿಕವಾಗಿ 6 ಕನ್ನಡದ ಗೀತೆಗಳ ಸಮೂಹ ಗಾಯನವನ್ನ ಕೋಟಿ ಕಂಠ ಗೀತ ಗಾಯನ ಶೀರ್ಷಿಕೆಯಡಿಯಲ್ಲಿ ಜಿಲ್ಲೆಯಾದ್ಯಂತ ಮಾಡಿ ಯಶಸ್ವಿಯಾಗಿತ್ತು.

ಈ ಹಿನ್ನೆಲೆಯಲ್ಲಿ ಈ ವರ್ಷವೂ ಅ. 28 ರಂದು ಬೆಳಿಗ್ಗೆ 11 ಗಂಟೆಯಿಂದ ಏಕಕಾಲದಲ್ಲಿ ನಾಡಗೀತೆ, ಹುಯಿಲಗೋಳ ನಾರಾಯಣರಾಯರ ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು, ರಾಷ್ಟ್ರಕವಿ ಕುವೆಂಪುರವರ ಬಾರಿಸು ಕನ್ನಡ ಡಿಂಡಿಮವ, ಡಾ.ಡಿ.ಎಸ್. ಕರ್ಕಿಯವರ ಹಚ್ಚೇವು ಕನ್ನಡದ ದೀಪ, ನಾಡೋಜ ಡಾ. ಚೆನ್ನವೀರ ಕಣವಿಯವರ ವಿಶ್ವ ವಿನೂತನ ವಿದ್ಯಾಚೇತನ, ಡಾ.ಹಂಸಲೇಖರವರ ಹುಟ್ಟಿದರೆ ಕನ್ನಡ ನಾಡನಲ್ಲಿ ಹುಟ್ಟಬೇಕು ಗೀತೆಗಳನ್ನು ಹಾಡಲು ಸೂಚಿಸಲಾಗಿದ್ದು ಕಾರ್ಯಕ್ರಮದಲ್ಲಿ ಭಾಗವಹಿಸಲು ಅ.11 ರಿಂದ 28 ರ ತನಕ ನೋಂದಣಿ ಅಭಿಯಾನ ನಡೆಯಲಿದೆ ಮತ್ತು ಭಾಗವಹಿದವರಿಗೆ ಆನ್ಲೈನ್ ಪ್ರಮಾಣಪತ್ರವನ್ನು ನೀಡಲಾಗುವುದು ಎಂದು ತಿಳಿಸಲಾಗಿದೆ. ಕೋಟಿ ಕಂಠ ಗಾಯನ ಕಾರ್ಯಕ್ರಮದಲ್ಲಿ ಭಾಗವಹಿಸುವವರು https:/kannadasiri.karnataka.gov.in/kkg/public/ ನಲ್ಲಿ ಹೆಸರನ್ನು ನೊಂದಾಯಿಸಿಕೊಳ್ಳಬಹುದಾಗಿದೆ.
ಸದರಿ ಕಾರ್ಯಕ್ರಮವನ್ನು ಯಶಸ್ವಿಯಾಗಿಸುವ ನಿಟ್ಟಿನಲ್ಲಿ ಸಮಿತಿಯನ್ನು ರಚಿಸಲಾಗಿದ್ದು ಕಾರವಾರ ,ಶಿರಸಿ,ಕುಮಟಾ, ಭಟ್ಕಳ ತಾಲೂಕಿಗೆ ಅಧ್ಯಕ್ಷರಾಗಿ ಸಹಾಯಕ ಆಯುಕ್ತರು ಮತ್ತು ಸದಸ್ಯರಾಗಿ ಕಾರ್ಯನಿರ್ವಾಹಕ ಅಧಿಕಾರಿ ತಾಲ್ಲೂಕ್ ಪಂಚಾಯಿತಿ, ತಹಶೀಲ್ದಾರ್, ವೃತ್ತ ಪೋಲಿಸ್ ನಿರೀಕ್ಷರು, ಮತ್ತು ಕ್ಷೆತ್ರ ಶಿಕ್ಷಣ ಅಧಿಕಾರಿಗಳು ಸೇರಿದಂತೆ ಹಲವು ಅಧಿಕಾರಿಗಳು ಸಮಿತಿಯಲ್ಲಿರಲಿದ್ದಾರೆ.
ಜಿಲ್ಲೆಯ ಎಲ್ಲಾ ಕಚೇರಿ ಸಿಬ್ಬಂದಿಗಳು ಅಧಿಕಾರಿಗಳು ಮತ್ತು ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗಿಯಾಗಿ ಯಶಸ್ವಿಯಾಗಿಸುವಂತೆ ಜಿಲ್ಲಾಡಾಳಿತ ಪ್ರಕಟಣೆಯಲ್ಲಿ ತಿಳಿಸಿದೆ.

300x250 AD
Share This
300x250 AD
300x250 AD
300x250 AD
Back to top