Slide
Slide
Slide
previous arrow
next arrow

ಕ್ರೀಡಾಕೂಟ:ಕಿಬ್ಬಳ್ಳಿ ಪ್ರೌಢಶಾಲೆ ವಿದ್ಯಾರ್ಥಿನಿಯರು ವಲಯ ಮಟ್ಟಕ್ಕೆ ಆಯ್ಕೆ

300x250 AD

ಸಿದ್ದಾಪುರ: ತಾಲೂಕಿನ ಕಿಬ್ಬಳ್ಳಿಯ ಶ್ರೀ ಮಹಾಗಣಪತಿ ಪ್ರೌಢಶಾಲೆಯ ಐದು ಜನ ವಿದ್ಯಾರ್ಥಿನಿಯರು ಹೆಣ್ಣುಮಕ್ಕಳ ಪ್ರೌಢಶಾಲೆಗಳ ಕ್ರೀಡಾಕೂಟದಲ್ಲಿ ಜಿಲ್ಲಾ ಮಟ್ಟದಲ್ಲಿ ಸಾಧನೆ ಮಾಡಿ ಬೆಳಗಾವಿ ವಲಯ ಮಟ್ಟಕ್ಕೆ ಆಯ್ಕೆಯಾಗಿದ್ದು ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ.

ಕಲ್ಪನಾ ಗಣಪತಿ ಗೌಡ, ರಕ್ಷಿತಾ ಪರಮೇಶ್ವರ್ ಗೌಡ, ವೀಣಾ ಮೋಹನ್ ಗೌಡ, ಪ್ರಜ್ಞಾ ನಾಗಪತಿ ಹೆಗಡೆ, ಮಧುರಾ ಮಾಬ್ಲೇಶ್ವರ್ ಗೌಡ ಈ ವಿದ್ಯಾರ್ಥಿನಿಯರು ಆಯ್ಕೆಯಾಗಿದ್ದು ಇವರನ್ನು ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರು ಕಾರ್ಯದರ್ಶಿಗಳು ಹಾಗೂ ಸರ್ವ ಸದಸ್ಯರು, ಶಾಲಾ ಮುಖ್ಯೋದ್ಯಾಪಕರು ಹಾಗೂ ಶಿಕ್ಷಕ ವೃಂದ ಬೋಧಕೇತರ ಸಿಬ್ಬಂದಿಗಳು ಹಾಗೂ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ಅಭಿನಂದಿಸಿ ಹರ್ಷ ವ್ಯಕ್ತಪಡಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top