Slide
Slide
Slide
previous arrow
next arrow

ಹೆಂಡತಿಗೆ ಬೆಂಕಿ ಹಚ್ಚಿ ಸುಟ್ಟಿದ್ದ ಗಂಡನಿಗೆ ಜೀವಾವಧಿ ಶಿಕ್ಷೆ!

300x250 AD

ಕಾರವಾರ: ಸೀಮೆ ಎಣ್ಣೆ ಸುರಿದು ಹೆಂಡತಿಗೆ ಬೆಂಕಿ ಹಚ್ಚಿ ಹತ್ಯೆ ಮಾಡಿದ್ದ ಆರೋಪಿ ಪತಿಗೆ ಇಲ್ಲಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ 5 ಸಾವಿರ ದಂಡ ವಿಧಿಸಿ ಆದೇಶಿಸಿದೆ.
ಕುಮಟಾದ ಮೂರೂರಿನ ದುಗ್ಗು ಗೌಡ ಶಿಕ್ಷೆಗೊಳಗಾದ ಅಪರಾಧಿ. ಈತ ತನ್ನ ಹೆಂಡತಿ ಗಣಪಿಯನ್ನು 11 ವರ್ಷಗಳ ಹಿಂದೆ ಮದುವೆಯಾಗಿದ್ದ. ಆದರೆ ಮದುವೆಯಾದಾಗಿನಿಂದಲೂ ತನಗೆ ನೀನು ಇಷ್ಟವಿಲ್ಲ. ತಾನು ಬೇರೆ ಹುಡುಗಿಯನ್ನು ಪ್ರೀತಿಸುತ್ತಿದ್ದೆ ಎಂದು ಹೀಯಾಳಿಸಿ ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡುತ್ತಿದ್ದ. ಬಳಿಕ 2016ರ ಮಾ.20ರಂದು ಸಂಬಂಧಿಕರನ್ನು ಕರೆದು ರಾಜಿ ಪಂಚಾಯಿತಿ ಮಾಡಿಸಿದ ಸಿಟ್ಟಿನಲ್ಲಿ ಹೆಂಡತಿಗೆ ಹೊಡೆದು ಬಡಿದು ಆಕೆಯ ಮೈಮೇಲೆ ಸೀಮೆ ಎಣ್ಣೆ ಹಾಕಿ ಬೆಂಕಿ ಹಚ್ಚಿ ಸುಟ್ಟಿದ್ದ.
ಸುಟ್ಟ ಗಾಯಗಳಾಗಿದ್ದ ಗಣಪಿಯನ್ನ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ವಾರದ ಬಳಿಕ ಮೃತಪಟ್ಟಿದ್ದಳು. ಈ ಬಗ್ಗೆ ಕುಮಟಾ ಠಾಣೆಯಲ್ಲಿ ಪ್ರಕರಣ ದಾಖಲಾಗಿ ಆರೋಪ ಪಟ್ಟಿ ನ್ಯಾಯಾಲಯಕ್ಕೆ ಸಲ್ಲಿಸಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಡಿ.ಎಸ್. ವಿಜಯಕುಮಾರ ಅವರು ಆರೋಪ ಸಾಬಿತಾದ ಹಿನ್ನೆಲೆಯಲ್ಲಿ ಆರೋಪಿತನಿಗೆ ಭಾರತೀಯ ದಂಡ ಸಂಹಿತೆ ಕಲಂ 302 ರಡಿಯಲ್ಲಿ ಜೀವಾವಧಿ ಶಿಕ್ಷೆ ಹಾಗೂ 5 ಸಾವಿರ ದಂಡ ವಿಧಿಸಿ ಆದೇಶಿಸಿದ್ದಾರೆ. ಸರ್ಕಾರದ ಪರವಾಗಿ ಪ್ರಧಾನ ಸರ್ಕಾರಿ ವಕೀಲರಾದ ತನುಜಾ ಬಿ.ಹೊಸಪಟ್ಟಣ ವಾದ ಮಂಡಿಸಿದ್ದರು.

300x250 AD
Share This
300x250 AD
300x250 AD
300x250 AD
Back to top