ಶಿರಸಿ : ನಗರದ ಶ್ರೀ ಮಹಲಿಂಗಪ್ಪ ಭೂಮ ಪ್ರೌಢಶಾಲೆಯಲ್ಲಿ ಮಹಿಳಾ ಜ್ಞಾನ ಮತ್ತು ವಿಕಾಸ ಕಾರ್ಯಕ್ರಮದ ಅಡಿಯಲ್ಲಿ ಅ.21 ಶುಕ್ರವಾರದಂದು ಬೆಳಿಗ್ಗೆ 11 ಗಂಟೆಗೆ ಸಿರಿಧಾನ್ಯ ಪ್ರಾತ್ಯಕ್ಷಿತೆ ಮತ್ತು ಮಾಹಿತಿ ಕಾರ್ಯಕ್ರಮ ನಡೆಯಲಿದೆ.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ (ರಿ) ಶಿರಸಿ ಆಶ್ರಯದಲ್ಲಿ ನಡೆಯಲಿದ್ದು ಕಾರ್ಯಕ್ರಮದ ಉದ್ಘಾಟನೆಯನ್ನು ಅಖಿಲ ಭಾರತೀಯ ಗ್ರಾಹಕ ಪಂಚಾಯತ ಕರ್ನಾಟಕ ಪ್ರಾಂತ ಅಧ್ಯಕ್ಷ ರಾಮು ಹರಿ ಕಿಣಿ ನೆರವೇರಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಸಿರಿಧಾನ್ಯಗಳ ಬಳಕೆಯ ಉಪಯುಕ್ತತೆಯ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತಿದ್ದು, ಸಂಪನ್ಮೂಲ ವ್ಯಕ್ತಿಗಳಾಗಿ ಆಹಾರ ಮತ್ತು ಪೋಷಣ ವಿಭಾಗ ಕೃಷಿ ವಿಜ್ಞಾನ ಕೇಂದ್ರ ಶಿರಸಿಯ ವಿಜ್ಞಾನಿಗಳಾದ ಡಾ.ರವಿ ವಾಯ್ ಮತ್ತು ಸಿರಿಧಾನ್ಯ ಮಾರುಕಟ್ಟೆ ಯೋಜನಾಧಿಕಾರಿ ರಮೇಶ್ ಯು.ಎಮ್ ಆಗಮಿಸಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭೂಮ ಪ್ರೌಢಶಾಲೆಯ ಮುಖ್ಯಾಧ್ಯಾಪಕ ಎಚ್.ಎಸ್. ನಟರಾಜ ವಹಿಸಲಿದ್ದು ಮುಖ್ಯ ಅತಿಥಿಗಳಾಗಿ ನಾಯ್ಕ ,ದತ್ತಾತ್ರೇಯ ಭಟ್, ರಾಘವೇಂದ್ರ ನಾಯ್ಕ ಆಗಮಿಸಲಿದ್ದಾರೆ.
ಈ ಕಾರ್ಯಕ್ರಮದ ಉಪಯೋಗವನ್ನು ಎಲ್ಲರೂ ಪಡೆದುಕೊಳ್ಳುವಂತೆ ಪ್ರಕಟಣೆಯಲ್ಲಿ ಕೋರಲಾಗಿದೆ
Attachments