ದಾಂಡೇಲಿ: ಪಟ್ಟಣದ ಬಿಜೆಪಿ ಕಚೇರಿಯಲ್ಲಿ ತಾಲೂಕಾ ಬಿಜೆಪಿ ಘಟಕದ ಕಾರ್ಯಕಾರಿಣಿ ಸಭೆ ನಡೆಯಿತು. ಈ ವೇಳೆ ಭಾರತಮಾತೆಯ ಭಾವಚಿತ್ರಕ್ಕೆ, ಪಂಡಿತ್ ದೀನದಯಾಳ್ ಉಪಾಧ್ಯಾಯ ಹಾಗೂ ಶ್ಯಾಮ ಪ್ರಸಾದ್ ಮುಖರ್ಜಿ ಅವರ ಭಾವಚಿತ್ರಕ್ಕೆ ಪೂಜೆ ಪುಷ್ಪಾರ್ಚನೆ ಸಲ್ಲಿಸುವುದರ ಮೂಲಕ ಸಭೆಗೆ ಚಾಲನೆ ನೀಡಲಾಯಿತು.
ಈ ಸಂದರ್ಭದಲ್ಲಿ ದಾಂಡೇಲಿ ಘಟಕದ ಅಧ್ಯಕ್ಷ ಚಂದ್ರಕಾಂತ ಕ್ಷೀರಸಾಗರ, ಜಿಲ್ಲಾ ಕಾರ್ಯದರ್ಶಿ ಬಸವರಾಜ ಕಲಶೆಟ್ಟಿ, ಜಿಲ್ಲಾ ಕಾರ್ಯದರ್ಶಿ ಹಾಗೂ ದಾಂಡೇಲಿ ಘಟಕದ ಉಸ್ತುವಾರಿ ನಂದು ಗಾಂವ್ಕರ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಚಂದ್ರು ಎಸಳೆ, ದಾಂಡೇಲಿ ಘಟಕದ ಬಿಜೆಪಿ ಕಾರ್ಯದರ್ಶಿ ಗುರು ಮಠಪತಿ ಹಾಗೂ ಹಿರಿಯ ಕಾರ್ಯಕರ್ತರಾದ ಶಾರದಾ ಪರಶುರಾಮ, ನಗರಸಭೆ ಸದಸ್ಯರು, ಮೋರ್ಚಾ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.