• Slide
    Slide
    Slide
    previous arrow
    next arrow
  • ಜಿಲ್ಲಾ ಮಟ್ಟದ ಸಮಿತಿ ಸದಸ್ಯರ ನೇಮಕಕ್ಕೆ ಅರ್ಜಿ ಆಹ್ವಾನ

    300x250 AD

    ಕಾರವಾರ: ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅರೆಅಲೆಮಾರಿ ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಸಮುದಾಯಗಳ ಅಭಿವೃದ್ಧಿ ಕೋಶದಿಂದ ಸರ್ಕಾರದ ಜಾರಿಗೆ ತರುವ ಯೋಜನೆಗಳ ಅನುಷ್ಠಾನಕ್ಕೆ ಜಿಲ್ಲಾ ಮಟ್ಟದ ಸಮಿತಿಯಲ್ಲಿ ಸದಸ್ಯರನ್ನು ನೇಮಿಸಲು ಅರ್ಜಿ ಆಹ್ವಾನಿಸಲಾಗಿದೆ.
    ಆಸಕ್ತ ಸಮುದಾಯಗಳ ಮುಂಖಡರು ನವೆಂಬರ್ 3ರ ಒಳಗಾಗಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿಗೆ ಅರ್ಜಿ ಸಲ್ಲಿಸಬಹುದು. ಅರ್ಜಿಯೊಂದಿಗೆ ಇತ್ತೀಚಿನ 2 ಫೋಟೋ, ಜಾತಿ ಪ್ರಮಾಣ ಪತ್ರ, ಆಧಾರ ಕಾರ್ಡ್, ರೇಷನ್ ಕಾರ್ಡ್ನ್ನು ಲಗತ್ತಿಸಬೇಕು. ಈ ಹಿಂದೆ ಜಿಲ್ಲಾ ಮಟ್ಟದ ಸಮಿತಿಯಲ್ಲಿ ನಾಮನಿರ್ದೇಶಿತರಾದವರು ಪುನಃ ಅರ್ಜಿ ಸಲ್ಲಿಸಲು ಅವಕಾಶ ಇರುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 08382- 226903ಗೆ ಸಂಪರ್ಕಿಸಬಹುದು ಎಂದು ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top