Slide
Slide
Slide
previous arrow
next arrow

ಕೊರೊನಾ ಹೆಚ್ಚಳ ಹಿನ್ನೆಲೆ; ಧರ್ಮಸ್ಥಳದಲ್ಲಿ ಸೇವೆ ಸ್ಥಗಿತ

300x250 AD

ದಕ್ಷಿಣಕನ್ನಡ: ಕೊರೊನಾ ಮೂರನೆ ಅಲೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದ.ಕ.ಜಿಲ್ಲಾಡಳಿದ ನಿರ್ದೇಶನದಂತೆ ಪ್ರಸಿದ್ಧ ಧರ್ಮಸ್ಥಳ ಶ್ರೀಮಂಜುನಾಥೇಶ್ವರ ದೇವಸ್ಥಾನದಲ್ಲಿ ದರ್ಶನವನ್ನು ಹೊರತುಪಡಿಸಿ ಉಳಿದೆಲ್ಲಾ ಸೇವೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ಆ.5 ರಿಂದ 15 ರವರೆಗೆ ದೇವಸ್ಥಾನದಲ್ಲಿ ಶ್ರೀ ದೇವರ ದರ್ಶನಕ್ಕೆ ಮಾತ್ರ ಅವಕಾಶ ಕಲ್ಪಿಸಿದ್ದು; ಸೇವೆ, ಪ್ರಸಾದ, ಅನ್ನಸಂತರ್ಪಣೆ, ವಸತಿ ವ್ಯವಸ್ಥೆಗಳನ್ನು ಕಡ್ಡಾಯವಾಗಿ ಸ್ಥಗಿತಗೊಳಿಸಲಾಗಿದೆ. ಹಾಗೂ ವಾರಾಂತ್ಯಗಳಲ್ಲಿ (ಶನಿವಾರ ಮತ್ತು ಭಾನುವಾರ) ದೇವರ ದರ್ಶನವನ್ನೂ ನಿರ್ಬಂಧಿಸಲಾಗಿದೆ.

300x250 AD

ಈ ಹಿನ್ನೆಲೆಯಲ್ಲಿ ಭಕ್ತಾದಿಗಳು ಸಹಕರಿಸಬೇಕು ಎಂದು ಧರ್ಮಾಧಿಕಾರಿ ಶ್ರೀ ವೀರೇಂದ್ರ ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ಎ.ವಿ.ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This
300x250 AD
300x250 AD
300x250 AD
Back to top