ದಾಂಡೇಲಿ: ಹಳಿಯಾಳದಲ್ಲಿ ನಡೆಯುತ್ತಿರುವ ಕಬ್ಬು ಬೆಳೆಗಾರರ ಹೋರಾಟ ನ್ಯಾಯೋಚಿತವಾಗಿದೆ. ಕಬ್ಬು ಬೆಳೆಗಾರರ ಹೋರಾಟಕ್ಕೆ ಜೆಡಿಎಸ್ ಪಕ್ಷದಿಂದ ಸಂಪೂರ್ಣ ಬೆಂಬಲವಿದೆ ಎಂದು ಜೆಡಿಎಸ್ ಪಕ್ಷದ ರಾಜ್ಯ ವಕ್ತಾರ ರೋಶನ್ ಬಾವಾಜಿ ಹೇಳಿದ್ದಾರೆ.
ಅವರು ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿ, ಕಬ್ಬು ಬೆಳೆಗಾರರು ಬಹಳ ಸಂಕಷ್ಟದಲ್ಲಿದ್ದಾರೆ. ಅವರ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಸರಕಾರ ಕೂಡಲೆ ಅಗತ್ಯ ಕ್ರಮವನ್ನು ಕೈಗೊಳ್ಳಬೇಕೆಂದು ಆಗ್ರಹಿಸಿದರು.