Slide
Slide
Slide
previous arrow
next arrow

ಪರೇಶ ಸಾವಿನ ಪ್ರಕರಣ ಮರು ತನಿಖೆಗೆ ಸಿಎಂಗೆ ಕಮಲಾಕರ ಮೇಸ್ತಾ ಒತ್ತಾಯ

300x250 AD

ಬೆಂಗಳೂರು: ಹೊನ್ನಾವರ ಪಟ್ಟಣದಲ್ಲಿ ನಡೆದಿದ್ದ ಯುವಕ ಪರೇಶ ಮೇಸ್ತಾ ಸಾವಿನ ಪ್ರಕರಣವನ್ನು ಸಿಬಿಐನಿಂದ ಮರು ತನಿಖೆ ಮಾಡಿಸುವಂತೆ ಪರೇಶ ಮೇಸ್ತಾ ತಂದೆ ಕಮಲಾಕರ ಮೇಸ್ತಾ ಒತ್ತಾಯಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.
ವಿಧಾನಸೌಧದಲ್ಲಿ ಮುಖ್ಯಮಂತ್ರಿಗಳನ್ನು ಭೇಟಿಯಾದ ಕಮಲಾಕರ ಮೇಸ್ತಾ, ನನ್ನ ಮಗನ ಸಾವು ಅಸಹಜ ಸಾವಾಗಿದೆ ಎಂದು ಸಿಎಂ ಬಳಿ ಅಳಲು ತೋಡಿಕೊಂಡಿದ್ದಾರೆ. ಸಿಬಿಐಗೆ ಸಾಕ್ಷ್ಯಾಧಾರಗಳು ಲಭ್ಯ ಆಗಿಲ್ಲ ಎಂಬ ಕಾರಣಕ್ಕೆ ಬಿ ರಿಪೋರ್ಟ್ ಸಲ್ಲಿಸಿದೆ ಎಂದು ಆರೋಪಿಸಿದ್ದಾರೆ. ಸಿಬಿಐ ಬಿ ರಿಪೋರ್ಟ್ ಸಲ್ಲಿಸಿರುವುದರಿಂದ ನನಗೆ ಅನ್ಯಾಯವಾಗಿದೆ. ನನ್ನ ಮಗ ಪರೇಶ್ ಮೆಸ್ತಾನ ಪ್ರಕರಣವನ್ನು ಸಿಬಿಐಗೆ ನೀಡುವಾಗ 4 ತಿಂಗಳ ಅವಧಿ ಮೀರಿತ್ತು. ಬಹುತೇಕ ಸಾಕ್ಷ್ಯಾಧಾರಗಳು ನಾಶವಾಗಿತ್ತು. ಹೀಗಾಗಿ ಮತ್ತಷ್ಟು ಆಳವಾದ ತನಿಖೆ ಮಾಡಬೇಕಾದ ಅವಶ್ಯಕತೆ ಇದೆ ಎಂದು ಮನವಿ ಮಾಡಿಕೊಂಡರು.
ಪುನರ್ ಪರಿಶೀಲಿಸುವ ಭರವಸೆ: ಪರೇಶ್ ಮೇಸ್ತಾ ತಂದೆ ಕಮಲಾಕರ ಮೇಸ್ತಾ ಅವರ ಮನವಿಯನ್ನು ಆಲಿಸಿದ ಸಿಎಂ ಬೊಮ್ಮಾಯಿ, ತಂದೆಯಾಗಿ ನಿಮ್ಮ ಕಷ್ಟವನ್ನು ಸರ್ಕಾರ ಅರ್ಥ ಮಾಡಿಕೊಳ್ಳುತ್ತದೆ. ಮನವಿಯನ್ನು ಪರಿಶೀಲಿಸಿ, ಪುನರ್ ತನಿಖೆಗೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ ಎನ್ನಲಾಗಿದೆ.
ಈ ಸಂದರ್ಭದಲ್ಲಿ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ, ಶಾಸಕರಾದ ದಿನಕರ ಶೆಟ್ಟಿ ಮತ್ತು ಸುನೀಲ್ ನಾಯ್ಕ, ಕುಮಟಾ ಬಿಜೆಪಿ ಮಂಡಲದ ನಿಟಕಪೂರ್ವ ಅಧ್ಯಕ್ಷ ಕುಮಾರ ಮಾರ್ಕಂಡೆ, ಪರೇಶ ಮೇಸ್ತನ ತಮ್ಮ ರಾಹುಲ್ ಮೇಸ್ತ ಹಾಗೂ ಇನ್ನಿತರರು ಇದ್ದರು.
ಪರೇಶ್ ಮೇಸ್ತಾ ಸಾವಿನ ಪ್ರಕರಣದ ಮರು ತನಿಖೆ ಮಾಡಲು ಮೃತgನ ತಂದೆ ಮುಖ್ಯಮಂತ್ರಿಗಳಿಗೆ ಒತ್ತಾಯ ಮಾಡಿದ್ದಾರೆ. ಈ ಬಗ್ಗೆ ಸಿಎಂ ಬೊಮ್ಮಾಯಿಯವರು ತೀರ್ಮಾನ ಕೈಗೊಳ್ಳುತ್ತಾರೆ ಎಂದು ಆರಗ ಜ್ಞಾನೇಂದ್ರ ಹೇಳಿದರು .

300x250 AD
Share This
300x250 AD
300x250 AD
300x250 AD
Back to top