Slide
Slide
Slide
previous arrow
next arrow

ಅ.28ಕ್ಕೆ ಕೋಟಿ ಕಂಠ ಗಾಯನ

300x250 AD

ಕಾರವಾರ: ಈ ಬಾರಿ 67ನೇ ರಾಜ್ಯೋತ್ಸವದ ಸಂಭ್ರಮದಲ್ಲಿ ಕೋಟಿ ಕಂಠ ಗಾಯನವನ್ನು ಅ.28ಕ್ಕೆ ಹಮ್ಮಿಕೊಳ್ಳಲಾಗಿದೆ. ಅಂದು ಬೆಳಿಗ್ಗೆ 11ಕ್ಕೆ ಇಡೀ ಕರ್ನಾಟಕದಲ್ಲಿ ಏಕಕಾಲದಲ್ಲಿ ಈ ಕಾರ್ಯಕ್ರಮ ನಡೆಯಲಿದ್ದು, ಜಿಲ್ಲೆಯ ಆಯ್ದ ಸ್ಥಳಗಳಲ್ಲಿ 4 ಲಕ್ಷ ಜನ ಹಾಡಲಿದ್ದರೆ. ಕಾರವಾರದ ಸದಾಶಿವಗಡ ಕೋಟೆ ಸ್ಥಳದಲ್ಲಿ ಕಾರ್ಯಕ್ರಮ ಆಯೋಜನೆಗೊಂಡಿದೆ ಎಂದು ಶ್ರೀನಿವಾಸ್ ಪೂಜಾರಿ ಹೇಳಿದರು.

ಕುವೆಂಪುರವರ ನಾಡಗೀತೆ, ಬಾರಿಸು ಕನ್ನಡ ಡಿಂಡಿಮವ, ಹುಯಿಲಗೋಳ ನಾರಾಯಣರಾಯರ ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು, ಡಾ.ಡಿ.ಎಸ್.ಕರ್ಕಿಯವರ ಹಚ್ಚೇವು ಕನ್ನಡದ ದೀಪ, ಚೆನ್ನವೀರ ಕಣವಿಯವರ ವಿಶ್ವವಿನೂತನ ವಿದ್ಯಾಚೇತನ, ಹಂಸಲೇಖರ ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು ಎಂಬ 6 ಹಾಡುಗಳನ್ನು ಈ ವೇಳೆ ಹಾಡಿ ಸಂಭ್ರಮಿಸಲಾಗುತ್ತದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿಕೊಡಬೇಕು ಎಂದರು.

300x250 AD
Share This
300x250 AD
300x250 AD
300x250 AD
Back to top