Slide
Slide
Slide
previous arrow
next arrow

ಕೆಎಂಎಫ್’ನಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

300x250 AD

ಧಾರವಾಡ: ಕರ್ನಾಟಕ ಹಾಲು ಒಕ್ಕೂಟ(KMF)ದಲ್ಲಿ ಒಟ್ಟು 487 ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಡೆಪ್ಯೂಟಿ ಡೈರೆಕ್ಟರ್, ಜೂನಿಯರ್ ಟೆಕ್ನಿಷಿಯನ್ ಸೇರಿದಂತೆ ಒಟ್ಟು 487 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಲಾಗಿದ್ದು, ಆಸಕ್ತರು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ನವೆಂಬರ್​ 19.
ಸಂಸ್ಥೆಯ ಹೆಸರು: ಕರ್ನಾಟಕ ಹಾಲು ಒಕ್ಕೂಟ (KMF)
ಹುದ್ದೆಯ ಹೆಸರು: ಉಪ ನಿರ್ದೇಶಕರು, ಜೂನಿಯರ್ ತಂತ್ರಜ್ಞರು
ಹುದ್ದೆಗಳ ಸಂಖ್ಯೆ: 487
ಉದ್ಯೋಗ ಸ್ಥಳ: ಕರ್ನಾಟಕ
ಮಾಸಿಕ ವೇತನ: 17000ರಿಂದ 99600 ರೂ.ಗಳ ವರೆಗೆ
ಅರ್ಜಿ ಶುಲ್ಕ: ಪ.ಜಾ, ಪ.ಪಂ ಮತ್ತು ಪ್ರವರ್ಗ- 1, ವಿಕಲಚೇತನ ಅಭ್ಯರ್ಥಿಗಳು: 500 ರೂ.ಗಳು ಹಾಗೂ ಇತರ ಅಭ್ಯರ್ಥಿಗಳಿಗೆ 1000 ರೂ.ಗಳು
ಪಾವತಿ ವಿಧಾನ: ಆನ್‌ಲೈನ್‌ನಲ್ಲಿ ಶುಲ್ಕ ಪಾವತಿಸಬೇಕು.
ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ ಹಾಗೂ ಸಂದರ್ಶನ
ಶೈಕ್ಷಣಿಕ ಅರ್ಹತೆ: ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು, ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಸಿಇ ಅಥವಾ ಐಸಿಡಬ್ಲ್ಯುಎ, ಎಂವಿಎಸ್ಸಿ, ಸ್ನಾತಕೋತ್ತರ ಪದವಿ, ಎಂಬಿಎ, ಎಂಬಿಬಿಎಸ್​, ಬಿಎಸ್ಸಿ, ಎಂಟೆಕ್​​ ಪೂರ್ಣಗೊಳಿಸಿರಬೇಕು.
ವಯೋಮಿತಿ: ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳನ್ನು ಹೊಂದಿರಬೇಕು. ಪ.ಜಾ, ಪ.ಪಂ ಮತ್ತು ಪ್ರವರ್ಗ- 1 ಅಭ್ಯರ್ಥಿಗಳಿಗೆ 05 ವರ್ಷಗಳು ಹಾಗೂ ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 03 ವರ್ಷಗಳ ವರೆಗೆ ವಯೋಮಿತಿ ಸಡಿಲಿಕೆ ಇದೆ.
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 20 ಅಕ್ಟೋಬರ್​​ 2022
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 19 ನವೆಂಬರ್ 2022
ಪ್ರಮುಖ ಲಿಂಕ್‌ಗಳು
ಅಧಿಕೃತ ಅಧಿಸೂಚನೆ: ಇಲ್ಲಿ ನೋಡಬಹುದು-1maunw

300x250 AD
Share This
300x250 AD
300x250 AD
300x250 AD
Back to top